DharwadDistrictsKarnatakaLatestMain Post

ವಿದ್ಯಾರ್ಥಿಗೆ ಸೋಂಕು – ಶಾಲೆಯ ಎಲ್ಲ ಮಕ್ಕಳಿಗೂ ಕೊರೊನಾ ಟೆಸ್ಟ್

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ 9ನೇ ತರಗತಿಯ ವಿದ್ಯಾರ್ಥಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆಯ ಎಲ್ಲ ಮಕ್ಕಳಿಗೂ ಕೊರೊನಾ ಟೆಸ್ಟ್ ಮಾಡಿಸಲು ಮನವಿ ಮಾಡಲಾಗಿದೆ.

ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಖಾಸಗಿ ಶಾಲೆಯ ವಿದ್ಯಾರ್ಥಿಯಲ್ಲಿ ಬುಧವಾರ ಸೋಂಕು ಪತ್ತೆಯಾಗಿದೆ. ಧಾರವಾಡದ ಎಸ್‍ಡಿಎಂ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಅಕ್ಕನಿಂದ ತಮ್ಮನಿಗೂ ಸೋಂಕು ವಕ್ಕರಿಸಿದೆ. ಇದರಿಂದಾಗಿ ವಿದ್ಯಾರ್ಥಿಯನ್ನು ಹೋಂಕ್ವಾರಂಟೈನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢ ಪಟ್ಟಿರುವುದರಿಂದ ಶಾಲೆಯ ಮಕ್ಕಳಿಗೆ ಹಾಗೂ ಪೋಷಕರಲ್ಲಿ ಭೀತಿ ಉಂಟಾಗಿದೆ. ಮತ್ತಷ್ಟು ಮಕ್ಕಳಿಗೆ, ಮಕ್ಕಳಿಂದ ಪೋಷಕರಿಗೆ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ತಹಶೀಲ್ದಾರ್ ಸಹ ಶಾಲೆಗೆ ಭೇಟಿ ಪರಿಶೀಲನೆ ನೆಡೆಸಿದರು. ಎಲ್ಲರಿಗೂ ಕೋವಿಡ್ ಟೆಸ್ಟ್ ಒಳಪಡಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಕಾರು ಅಪಘಾತ – ಹಿರಿಯ ನಟ ಶಿವರಾಮ್ ತಲೆಗೆ ಗಂಭೀರ ಗಾಯ

ಮುಂಜಾಗ್ರತಾ ಕ್ರಮವಾಗಿ ಸೋಮವಾರದವರೆಗೆ ಶಾಲೆಗೆ ರಜೆ ನೀಡಲಾಗಿದೆ. ಜೊತೆಗೆ ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಇತ್ತೀಚೆಗಷ್ಟೇ ಧಾರವಾಡ ಎಸ್‍ಡಿಎಂ ಆಸ್ಪತ್ರೆಯಲ್ಲಿ ಕೊರೊನಾ ಸ್ಫೋಟಗೊಂಡಿತ್ತು. ಸುಮಾರು 281 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದನ್ನೂ ಓದಿ: 9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ದೃಢ – ಶಾಲೆಗೆ ರಜೆ

Leave a Reply

Your email address will not be published. Required fields are marked *

Back to top button