ಹುಬ್ಬಳ್ಳಿ: ಎದೆ ಸೀಳಿದ್ರೆ ಎರಡು ಅಕ್ಷರಗಳು ಇಲ್ಲದವರು ಪಂಚರ್ ಹಾಕುವವರು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹುಬ್ಬಳ್ಳಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರು ಹಾಗೂ ನೌಕರ ಸಂಘದ ವತಿಯಿಂದ ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ಸರ್ಕಲ್‍ನಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪೊರಕೆ ಹಿಡಿದು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಟಯರ್‍ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ಸಂಸದ ತೇಜಸ್ವಿ ಸೂರ್ಯ ಪೌರಕಾರ್ಮಿಕರು, ಕಟ್ಟಡ ಕಾರ್ಮಿಕರು, ಗ್ಯಾರೇಜ್ ಕೆಲಸಗಾರರ ವಿರುದ್ಧ ಕೀಳಾಗಿ ಮಾತನಾಡಿರುವುದು ಖಂಡನೀಯವೆಂದು ಪ್ರತಿಭಟನಾಕಾರರು ತೇಜಸ್ವಿ ಸೂರ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಬಾಬಾಜಾನ ಮುಧೋಳ, ನರಸಿಂಹ ಪಾಲವಾಯಿ, ಶೋಭಾ ಕಮತರ, ಕಾಂಗ್ರೆಸ್ ಮುಖಂಡ ಮೋಹನ್ ಹಿರೇಮನಿ, ವಿಜಯ ಗುಂಟ್ರಾಳ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.