ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಬುಧವಾರದಿಂದ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಸೋಮವಾರ ಯೋಜನೆ ವಿರುದ್ಧ ಕೆಲವು ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ್ದು, ದೆಹಲಿ-ಗುರುಗ್ರಾಮ ಎಕ್ಸ್‌ಪ್ರೆಸ್ಸ್ ವೇ ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಅಗ್ನಿಪಥ್ ಯೋಜನೆಯನ್ನು ಕೇಂದ್ರ ರದ್ದು ಮಾಡುವಂತೆ ಹಲವು ಸಂಘಟನೆಗಳು ಒತ್ತಾಯಿಸಿ ಬಂದ್‌ಗೆ ಕರೆ ನೀಡಿದ್ದು, ಈ ಹಿನ್ನೆಲೆ ಶಾಂತಿಯನ್ನು ಕಾಪಾಡಲು ಪೊಲೀಸರು ಸರ್ಹೌಲ್ ಗಡಿ ಸಮೀಪ ಎಕ್ಸ್ಪ್ರೆಸ್ ವೇನಲ್ಲಿ ವಾಹನ ತಪಾಸಣೆ ಕೈಗೊಂಡಿದ್ದಾರೆ. ಈ ಕಾರಣ ಒಂದೇ ಕಡೆ ಭಾರೀ ವಾಹನಗಳ ರಾಶಿ ಕಂಡುಬಂದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಇದನ್ನೂ ಓದಿ: ಮಳೆಯಿಂದ ರಸ್ತೆಯೆಲ್ಲಾ ಜಲಾವೃತ – ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಪೊಲೀಸ್ ಹಾಗೂ ಪತ್ನಿ ಡ್ರೈನೇಜ್ ಗುಂಡಿಗೆ
Advertisement
Advertisement
ಇಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ಆಯೋಜಿಸಿವೆ. ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್ – ಹೋರಾಟಗಾರರಿಗೆ ಶಾಕ್, 35 ವಾಟ್ಸಪ್ ಗ್ರೂಪ್ ನಿಷೇಧ
Advertisement
Several kilometer long jam at Delhi Gurugram border express 5 km. traffic jam pic.twitter.com/dJLXdulflV
— BHARAT GHANDAT (@BHARATGHANDAT2) June 20, 2022
Advertisement
17.5 ರಿಂದ 21 ವರ್ಷದೊಳಗಿನ ಸೈನಿಕರನ್ನು 4 ವರ್ಷಗಳ ಅವಧಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ನೇಮಕ ಮಾಡಿಕೊಳ್ಳುವ ಕೇಂದ್ರದ ಯೋಜನೆಗೆ ಕಳೆದ 4 ದಿನಗಳಿಂದ ಬಿಹಾರ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಹರಿಯಾಣ, ತೆಲಂಗಾಣ ರಾಜ್ಯಗಳಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಪರಿಣಾಮ ಭಾನುವಾರ 483 ರೈಲುಗಳು ರದ್ದಾಗಿವೆ.