ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಕ್ಕರೆ ನಾಡು ಮಂಡ್ಯ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಭಾಗಿಯಾಗಿವೆ.
ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಇಂದು (ಅ.18) ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ನಾಳೆಯೂ (ಅ.19) ಇದೇ ಸಮಯದಲ್ಲಿ ಉದ್ಯೋಗ ಮೇಳ ಜರುಗಲಿದೆ. ಆಸಕ್ತ ಯುವಜನರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಇದನ್ನೂ ಓದಿ: ನಿರಂತರ ಮಳೆಯಿಂದ ಹೆಚ್ಚಿದ ಒಳಹರಿವು – ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಭರ್ತಿ
ಉದ್ಯೋಗ ಮೇಳದಲ್ಲಿ ದೇಶದ ಉದ್ದಗಲಕ್ಕೂ ಇರುವ 150ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳಕ್ಕೆ ಭಾಗಿಯಾಗಿವೆ. ಮಂಡ್ಯ ಭಾಗದ 3,000ಕ್ಕೂ ಹೆಚ್ಚು ನಿರುದ್ಯೋಗಿ ಯುವ ಜನರಿಗೆ ಉದ್ಯೋಗ ಕೊಡಿಸುವ ಗುರಿಯನ್ನು ಈ ಮೂಲಕ ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ರಾಯಚೂರು | ಆಸ್ಪತ್ರೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣ ಕಳ್ಳತನ
ʻಮಂಡ್ಯ ಟು ಇಂಡಿಯಾʼ ಎನ್ನುವ ಘೋಷವಾಕ್ಯದೊಂದಿಗೆ ಉದ್ಯೋಗ ಮೇಳ ನಡೆಯುತ್ತಿದ್ದು, ಮಂಡ್ಯದ ಇತಿಹಾಸದಲ್ಲಿಯೇ ಇದೊಂದು ಮೈಲುಗಲ್ಲು ಆಗಲಿದೆ. ರೈತಾಪಿ ಜನರ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವುದು ಆಗಿದ್ದು, ಈ ಮೂಲಕ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಜೈಲಿನಲ್ಲಿರೋ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಪ್ರೊಡ್ಯೂಸರ್‌ಗೆ ಬೆದರಿಕೆ ಕೇಸ್‌ಗೆ ಮರುಜೀವ
ಮೇಕಾನ್, ಭಾರತೀಯ ಉಕ್ಕು ಪ್ರಾಧಿಕಾರ (SAIL), ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC), ಲೈಲೋಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ (BHEL), ಜಿಂದಾಲ್ ಸ್ಟೀಲ್ ಸೇರಿದಂತೆ 150ಕ್ಕೂ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ನೇರ ನೇಮಕಾತಿ ಮಾಡಿಕೊಳ್ಳುತ್ತಿವೆ.