ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ನಾಗರಿಕರ ನಡುವೆ ಘರ್ಷಣೆ ನಡೆದಿದೆ.
ಶನಿವಾರ ನಡೆದ ಹೊಸ ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. 90 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ನಿಮ್ಮ ನಾಚಿಕೆಗೇಡಿನ ನಡವಳಿಕೆ ತೋರಿಸುವ ವೀಡಿಯೋ ನನ್ನ ಬಳಿ ಇದೆ – ರಾಜ್ಯಪಾಲರ ವಿರುದ್ಧ ದೀದಿ ಗುಡುಗು
Advertisement
Advertisement
ಹಣದುಬ್ಬರ, ಹೆಚ್ಚಿನ ತೆರಿಗೆ ಮತ್ತು ವಿದ್ಯುತ್ ಕೊರತೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ. ಪಿಒಕೆಯಾದ್ಯಂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಚಳವಳಿಯಾಗಿ ಮಾರ್ಪಟ್ಟಿವೆ.
Advertisement
ಪ್ರತಿಭಟನಾಕಾರರು ‘ಆಜಾದಿ’ (ಸ್ವಾತಂತ್ರ್ಯ) ಘೋಷಣೆಗಳನ್ನು ಕೂಗುತ್ತಿದ್ದಾರೆ. ಪ್ರತಿಭಟನಾಕಾರರು ಮುಜಫರಾಬಾದ್ ಮತ್ತು ಇತರ ಜಿಲ್ಲೆಗಳಲ್ಲಿ ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳ ನಡುವೆ ಘರ್ಷಣೆಯಾಗಿದೆ. ಪ್ರತಿಭಟನೆಯ ನೇತೃತ್ವವನ್ನು ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ಹೊತ್ತುಕೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ: ಮೋದಿ ಭವಿಷ್ಯ
Advertisement
ಶುಕ್ರವಾರ ಮುಷ್ಕರಕ್ಕೆ ಕರೆ ನೀಡಿದ ನಂತರ ಹತ್ತಾರು ನಾಯಕರು ಮತ್ತು ಕ್ರಿಯಾ ಸಮಿತಿಯ ಸದಸ್ಯರನ್ನು ಬಂಧಿಸಲಾಗಿದೆ.