ಪ್ರವಾದಿ ವಿರುದ್ಧ ಅವಹೇಳನ – ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಮರ ಪ್ರತಿಭಟನೆ, ಬುರ್ಕಾ ಧರಿಸಿ ಬೀದಿಗಿಳಿದ ಮಹಿಳೆಯರು

Advertisements

ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ, ನವೀನ್ ಜಿಂದಾಲ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಇಂದು ಬೃಹತ್‌ ಪ್ರತಿಭಟನೆ ನಡೆಯಿತು.

Advertisements

ಶುಕ್ರವಾರದ ಪ್ರಾರ್ಥನೆಯ ನಂತರ ದೆಹಲಿಯ ಜಾಮಾ ಮಸೀದಿ ಹೊರಗೆ ಪ್ರತಿಭಟನೆ ನಡೆದಿದೆ. ಅದರ ಬೆನ್ನಲ್ಲೇ ಕಾಶ್ಮೀರ, ಉತ್ತರ ಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಉತ್ತಾರಖಂಡ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾಮೂಹಿಕ ಪ್ರತಿಭಟನೆಗಳು ನಡೆದವು. ಇದನ್ನೂ ಓದಿ: ಕೋಮು ದ್ವೇಷಭಾಷಣ – ಓವೈಸಿ, ನೂಪುರ್ ಶರ್ಮಾ ವಿರುದ್ಧ FIR

Advertisements

ನವಿ ಮುಂಬೈನಲ್ಲಿ ಬುರ್ಕಾ ಧರಿಸಿ ಬೀದಿಗಿಳಿದು ಮಹಿಳೆಯರ ಪ್ರತಿಭಟನೆ ನಡೆಸಿದರು. ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಂಐಎಂ ಕಾರ್ಯಕರ್ತರು ನಮಾಜ್ ಮಾಡಿ ವಿಶೇಷ ರೀತಿಯಲ್ಲಿ ಪ್ರತಿಭಟಿಸಿದರು.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು. ಈ ವೇಳೆ ಪೊಲೀಸರು ಲಾಠಿಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿದ್ದಾರೆ. ಇದನ್ನೂ ಓದಿ: ಪ್ರವಾದಿಗೆ ಅವಹೇಳನ – ಭಾರತದ ನಿಲುವಿನ ಬಗ್ಗೆ ತೃಪ್ತಿಯಿದೆ ಎಂದ ಇರಾನ್

Advertisements

ಜಮ್ಮು-ಕಾಶ್ಮೀರದಲ್ಲಿ ಹಲವೆಡೆ ಭಾರಿ ಪ್ರತಿಭಟನೆ ನಡೆಯಿತು. ಇದರಿಂದ ಜಮ್ಮುವಿನ ಭದರ್ವಾ ಹಾಗೂ ಕಿಶ್ತ್‌ವಾರ್‌ ಕೆಲವು ಭಾಗಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಕರ್ಫ್ಯೂ ವಿಧಿಸಲಾಗಿದೆ.

30 ಮಂದಿ ಅರೆಸ್ಟ್‌
ಸಾರ್ವಜನಿಕ ಸ್ಥಳಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಬಂಧನ ಖಂಡಿಸಿ ಪಕ್ಷದ ಕಾರ್ಯಕರ್ತರು ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ಆದೇಶ ಧಿಕ್ಕರಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ 33 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisements
Exit mobile version