– ಕರ್ನಾಟಕವನ್ನ ಸುಸ್ಥಿರ ರಾಜ್ಯ ಮಾಡುವ ಉದ್ದೇಶವಿದೆ
– 20 ಲಕ್ಷ ಉದ್ಯೋಗ ಸೃಷ್ಟಿ ಭರವಸೆ ನೀಡಿದ ಡಿಸಿಎಂ
ಬೆಂಗಳೂರು: ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜೊತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ತಿಳಿಸಿದರು.
Advertisement
ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಇನ್ವೆಸ್ಟ್ ಕರ್ನಾಟಕ 2025 ಕೇವಲ ಹೂಡಿಕೆ ಸಮಾವೇಶ ಮಾತ್ರವಲ್ಲ. ಇದು ಭವಿಷ್ಯವನ್ನು ರೂಪಿಸುವ ನಮ್ಮ ಸಹಯೋಗದ ಹಾಗೂ ಕೈಗಾರಿಕಾ ಪ್ರಗತಿ ಸಾಧಿಸುವ ವೇದಿಕೆ. ಇದು ಎಲ್ಲರನ್ನು ಒಳಗೊಂಡು ಪ್ರಗತಿಯನ್ನು ಖಾತರಿಪಡಿಸುವ ಕಾರ್ಯಕ್ರಮ ಎಂದರು.ಇದನ್ನೂ ಓದಿ: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ – ಜಮೀರ್
Advertisement
Advertisement
ಇದು ತಕ್ಷಣದ ಲಾಭಕ್ಕಿಂತ ಹೆಚ್ಚಾಗಿ ದೀರ್ಘಾವಧಿಯ ಯೋಜನೆಗೆ ತಳಹದಿಯಾಗಿದೆ. ಇಂದು ಇಲ್ಲಿರುವ ಪ್ರತಿಯೊಂದು ನೀತಿ, ಸುಧಾರಣೆ ಕಾರ್ಯರೂಪಕ್ಕೆ ಬರಲಿದೆ. ನಾವು ಸುಲಭ ವ್ಯಾಪಾರ ವಾತಾವರಣ ಸೃಷ್ಟಿಸುವ ಬಗ್ಗೆ ಕೇವಲ ಮಾತನಾಡುವುದಿಲ್ಲ. ಅದನ್ನು ಮಾಡಿ ತೋರಿಸುತ್ತೇವೆ. ಏಕಗವಾಕ್ಷಿ ಮೂಲಕ ಅನುಮತಿ ಪ್ರಕ್ರಿಯೆ ಡಿಜಿಟಲೀಕರಣಗೊಳಿಸಲಾಗಿದ್ದು, ಕಾಲಮಿತಿಯಲ್ಲಿ ಪಾರದರ್ಶಕವಾಗಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು.
Advertisement
ನೂತನ ನೀತಿ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ:
ಮೂಲ ಸೌಕರ್ಯ ಒದಗಿಸಲು ವ್ಯವಸ್ಥೆ ರೂಪಿಸಲಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ ಎಂದು ರಾಜ್ಯ ಸರ್ಕಾರದ ಪರವಾಗಿ ಭರವಸೆ ನೀಡುತ್ತೇನೆ. ನಮ್ಮ ಸರ್ಕಾರ ಪ್ರಗತಿಪರ ಆಲೋಚನೆಗೆ ಬದ್ಧವಾಗಿದ್ದು, ಅತ್ಯುತ್ತಮ ಮೌಲ್ಯದ ಉದ್ಯೋಗ ಸೃಷ್ಟಿ, ಸರಬರಾಜು ಸರಪಳಿ ಸುಭದ್ರಗೊಳಿಸಿ, ತಂತ್ರಜ್ಞಾನ ಆಧಾರಿತ ಸಂಸ್ಥೆಗಳನ್ನು ರೂಪಿಸುವುದು ನಮ್ಮ ಕಾರ್ಯತಂತ್ರವಾಗಿದೆ. ಮಂಗಳವಾರ ಪ್ರಕಟಿಸಲಾದ ಕರ್ನಾಟಕ ಕೈಗಾರಿಕಾ ನೀತಿ 2025-30 ಎಲ್ಲರನ್ನು ಒಳಗೊಂಡು ಪ್ರಗತಿ ಸಾಧಿಸುವ ದೂರದೃಷ್ಟಿ ಹೊಂದಿದೆ. ಇದರಿಂದ ರಾಜ್ಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಗುರಿ ಇದೆ ಎಂದರು.
ನಾವು ಈಗಾಗಲೇ ಬಂಡವಾಳ ಹೂಡಿಕೆಯಲ್ಲಿ ಸಬ್ಸಿಡಿ ಸೇರಿದಂತೆ ಅನೇಕ ಆಕರ್ಷಕ ಅವಕಾಶಗಳನ್ನು ನೀಡಿದ್ದು, ಉದ್ಯೋಗ ಸೃಷ್ಟಿ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿರುದ್ಯೋಗ ಸಮಸ್ಯೆ, ಪರಿಸರ ಮಾಲಿನ್ಯ ಸೇರಿದಂತೆ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ನೀಡುವ ಉದ್ದೇಶವಿದೆ ಎಂದು ತಿಳಿಸಿದರು.ಇದನ್ನೂ ಓದಿ: ಘಜ್ನಿಯಿಂದ ಧ್ವಂಸ – ಈಗ ಮತ್ತೆ ಸೋಮನಾಥದಲ್ಲಿ ಪುನರ್ ಪ್ರತಿಷ್ಠೆಯಾಗಲಿದೆ ಜ್ಯೋತಿರ್ಲಿಂಗ!
ಬೆಂಗಳೂರಿನ ಹೊರಗೆ ಉದ್ಯಮ ಸ್ಥಾಪಿಸಿ:
ನೀವೆಲ್ಲರೂ ಬೆಂಗಳೂರಿನ ಹೊರತಾಗಿ ರಾಜ್ಯದ ಇತರೆ ಭಾಗಗಳಲ್ಲಿ ಉದ್ಯಮ ಸ್ಥಾಪಿಸಲು ಮುಂದಾಗಬೇಕು. ನಾನು 20 ವರ್ಷಗಳ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಈಗ ಅದು 1.40 ಕೋಟಿಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1.10 ಕೋಟಿ ವಾಹನಗಳ ಸಂಖ್ಯೆ ಇದೆ. ಬೆಂಗಳೂರಿನಲ್ಲಿ ಸಂಚಾರ ಸಮಸ್ಯೆ ಬಗೆಹರಿಸಲು 1 ಲಕ್ಷ ಕೋಟಿಯಷ್ಟು ಹಣ ವೆಚ್ಚಮಾಡಲು ಮುಂದಾಗಿದ್ದೇವೆ. ಬೆಂಗಳೂರು ಬಿಸಿನೆಸ್ ಕಾರಿಡಾರ್ ಯಶಸ್ಸು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಹಕಾರದ ಭರವಸೆ ಕೊಡಬೇಕು:
ರಾಜ್ಯದಲ್ಲಿ ನಿರ್ಮಿಸಲಾಗಿರುವ ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಅವರು ಅತ್ಯುತ್ತಮ ಸಹಕಾರ ನೀಡಿದ್ದರು. ನಾನು ರೂಪಿಸಿದ ಪರಿಕಲ್ಪನೆಯಲ್ಲಿ ರೈತರಿಂದ ಒಂದೇ ಒಂದು ಎಕರೆ ಜಮೀನನ್ನು ಖರೀದಿ ಮಾಡದೇ 15 ಸಾವಿರ ಎಕರೆಯಲ್ಲಿ ಈ ಸೋಲಾರ್ ಪಾರ್ಕ್ ನಿರ್ಮಿಸಲಾಗಿದೆ. ಈ ಯೋಜನೆಯನ್ನು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ವಿದ್ಯುತ್ ಉತ್ಪಾದಕರು ಹಾಗೂ ರೈತರ ಸಹಯೋಗದಲ್ಲಿ ರೂಪಿಸಲಾಗಿದೆ. ಆಗಿನ ಕಾಲದಲ್ಲಿ ರೈತರ ಭೂಮಿಯ ಬೆಲೆ ಕೇವಲ 15 ಸಾವಿರ ರೂ. ಇತ್ತು ಆದರೆ ಈ ಯೋಜನೆಯಿಂದ ರೈತರು ಪ್ರತಿ ವರ್ಷ ಬಾಡಿಗೆ ರೂಪದಲ್ಲಿ 25 ಸಾವಿರ ರೂ. ಹಣವನ್ನು ಪಡೆಯುತ್ತಿದ್ದಾರೆ. 28 ವರ್ಷಗಳ ಕಾಲ ಈ ಹಣ ಪಡೆಯಲಿದ್ದಾರೆ. ನಮ್ಮ ಯೋಜನೆ ಯಶಸ್ಸಿನ ನಂತರ ಕೇಂದ್ರ ಸರ್ಕಾರ ಕರ್ನಾಟಕ ಮಾಡೆಲ್ ಅನುಸರಿಸುವಂತೆ ಇಡೀ ದೇಶಕ್ಕೆ ಕರೆ ನೀಡಿತು. ಈ ಯೋಜನೆಯಿಂದ ವಿದ್ಯುತ್ ಟ್ರಾನ್ಸ್ಮಿಷನ್‌ನಲ್ಲಿ ಆಗುತ್ತಿದ್ದ ನಷ್ಟ ತಪ್ಪಿಸಲಾಗಿದೆ.
`ಭಾರತ ಮಂಟಪ’ ಅಂತಾರಾಷ್ಟ್ರೀಯ ಕೇಂದ್ರ ಸ್ಥಾಪನೆಯ ಕನಸು:
ಕೇಂದ್ರ ಸಚಿವರು ನಮ್ಮ ರಾಜ್ಯಕ್ಕೆ ಈ ಹಿಂದೆ ನೀಡುತ್ತಿದ್ದಂತೆ ಹೆಚ್ಚಿನ ಸಹಕಾರ ನೀಡುವ ಭರವಸೆ ಕೊಟ್ಟು ಹೋಗಬೇಕು. ಸಚಿವರು ಬೆಂಗಳೂರಿನಲ್ಲಿ ಭಾರತ ಮಂಟಪ ಎಂಬ ಅತ್ಯುತ್ತಮ ಅಂತಾರಾಷ್ಟ್ರೀಯ ಕೇಂದ್ರ ಸ್ಥಾಪಿಸೋಣ, ಅದಕ್ಕಾಗಿ ಒಳ್ಳೆಯ ಜಾಗ ನೋಡಿ ಎಂದು ನನ್ನ ಕಿವಿಯಲ್ಲಿ ಹೇಳುತ್ತಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.
ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ 2ನೇ ದಿನವೂ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ವಿಜಯಪುರದಲ್ಲಿ 3,000 ಮೆಗಾವಾಟ್ ವಿದ್ಯುತ್ ಉತ್ಪಾದನಾ ಘಟಕ ಮತ್ತು ವಿಂಡ್ ಟರ್ಬೈನ್ ಬ್ಲೇಡ್ ತಯಾರಿಕಾ ಘಟಕ ಸ್ಥಾಪಿಸಲು ಸುಜ್ಲಾನ್ ಕಂಪನಿ ಒಪ್ಪಂದ ಮಾಡಿಕೊಂಡಿದೆ.
ವಿಜಯಪುರ ಅಥವಾ ಕಲಬುರಗಿಯಲ್ಲಿ ಪ್ರತಿ ದಿನ 800 ಟನ್ ಸಾಮರ್ಥ್ಯದ ಬಹುಬಗೆಯ ಬೇಳೆಕಾಳು ಸಂಸ್ಕರಣಾ ಘಟಕ ಸ್ಥಾಪಿಸಲು ವಿಂಗ್ಸ್- ವಿಟೆರಾ ಕಂಪನಿ ಬಂಡವಾಳ ತೊಡಗಿಸಲಿದೆ. ಇಂದು ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಎಂ ಬಿ ಪಾಟೀಲ್ ಚಾಲನೆ ನೀಡಿದ್ರು. ಹೂಡಿಕೆ ಸಮಾವೇಶದಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ.
ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಈ ಬಾರಿ ಹೆಲಿಕಾಪ್ಟರ್ ಹೋಲುವ ಏರ್ ಟ್ಯಾಕ್ಸಿ ಎಲ್ಲರ ಗಮನ ಸೆಳೀತಿದೆ. ಇನ್ನು, ಇದೇ ಮೊದಲ ಬಾರಿಗೆ ಮೊದಲ ಬಾರಿಗೆ ರಾಜ್ಯದ ಬೆಳವಣಿಗೆ ಕೊಡುಗೆ ನೀಡಿದ 14 ಕಂಪನಿ, ವ್ಯಕ್ತಿಗಳನ್ನ ಸರ್ಕಾರ ಗೌರವಿಸಿದೆ. ಈ ಕ್ಷಣಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಸಾಕ್ಷಿಯಾದ್ರು. ಈ ಮಧ್ಯೆ, ಬೆಂಗಳೂರಲ್ಲಿ 2ನೇ ಏರ್‌ಪೋರ್ಟ್ ಮೆರಿಟ್ ಆಧಾರ್ ಮೇಲೆ ನಿರ್ಮಾಣ ಆಗಲಿದೆ.. ಡಿಕೆ ಶಿವಕುಮಾರ್, ಪರಮೇಶ್ವರ್ ಸೇರಿ ಯಾರ ಒತ್ತಡಕ್ಕೂ ಮಣಿಯಲ್ಲ ಎಂದು ಸಚಿವ ಎಂಬಿ ಪಾಟೀಲ್ ಸ್ಪಷ್ಟಪಡಿಸಿದ್ರು.ಇದನ್ನೂ ಓದಿ: ನಿಮ್ಮ ʻಪಬ್ಲಿಕ್ ಟಿವಿʼ 13ನೇ ವಾರ್ಷಿಕೋತ್ಸವ ಸಂಪನ್ನ