ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ (Yeshasvini Scheme) ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು 1 ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಂಡಿದ್ದಾರೆ. ಈ ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ಟಿ ಸೋಮಶೇಖರ್ (ST Somashekhar) ಅವರು ತಿಳಿಸಿದ್ದಾರೆ.
ಯಶಸ್ವಿನಿ ಯೋಜನೆ ಕುರಿತು ಮಾತನಾಡಿದ ಸಚಿವರು, ಜನವರಿ ಅಂತ್ಯದವರೆಗೆ 30 ಲಕ್ಷ ಸದಸ್ಯರ ಗುರಿಗೆ ಎದುರಾಗಿ 33.10 ಲಕ್ಷ ಸದಸ್ಯರನ್ನು ನೋಂದಾಯಿಸಿ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
Advertisement
Advertisement
ಸದಸ್ಯರ ನೋಂದಣಿ ಕಾರ್ಯ ಮುಂದುವರಿಯುತ್ತಿರುವುದರ ಜೊತೆಗೆ 27 ಜಿಲ್ಲೆಗಳಲ್ಲಿನ 127 ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಜನವರಿ ಒಂದೇ ತಿಂಗಳಲ್ಲಿ 1,000ಕ್ಕೂ ಹೆಚ್ಚು ಫಲಾನುಭವಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಯಶಸ್ವಿನಿ ಯೋಜನೆಯಡಿ ಇದುವರೆಗೂ ರಾಜ್ಯಾದ್ಯಂತ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಸೇರಿದಂತೆ 474 ನೆಟ್‌ವರ್ಕ್ ಆಸ್ಪತ್ರೆಗಳು ಟ್ರಸ್ಟ್‌ನಲ್ಲಿ ನೋಂದಾಯಿಸಿಕೊಂಡಿವೆ. ಜನವರಿ 1ರಿಂದಲೇ ಫಲಾನುಭವಿಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
Advertisement
ಹೃದಯ ಸಂಬಂಧಿ ಕಾಯಿಲೆ, ಕಿವಿ, ಮೂಗು, ಗಂಟಲು ವ್ಯಾದಿಗಳು, ನರ, ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಸೇರಿದಂತೆ ಇತ್ಯಾದಿ ರೋಗಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದಸ್ಯರು ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ ಹಾಜರುಪಡಿಸಿ 1,650 ಚಿಕಿತ್ಸೆಗಳನ್ನು ನಗದುರಹಿತವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಬಜೆಟ್ ರಾಷ್ಟ್ರದ ಪ್ರಗತಿಗೆ ಭದ್ರ ಬುನಾದಿ: ಬೊಮ್ಮಾಯಿ
ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿಂದಿನ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ದರ ಹೆಚ್ಚಿದ್ದಲ್ಲಿ ಆ ದರವನ್ನು ಅಥವಾ ಪ್ರಸ್ತುತ ಯೋಜನೆಗೆ ಪರಿಗಣಿಸಿರುವ ಆಯುಷ್ಮಾನ್ ಭಾರತ ಚಿಕಿತ್ಸೆ ದರಗಳು ಹೆಚ್ಚಿದ್ದಲ್ಲಿ ಅವುಗಳನ್ನು ಪರಿಗಣಿಸಲು ಆದೇಶವಾಗಿರುತ್ತದೆ. ಅಂದರೆ ಯಾವ ಯೋಜನೆಯಲ್ಲಿ ಹೆಚ್ಚಿನ ದರ ಇರುತ್ತದೆಯೋ ಆ ದರವನ್ನು ಪರಿಗಣಿಸಿ ಆಸ್ಪತ್ರೆಗಳ ಬಿಲ್‌ಗಳನ್ನು ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.
ನೆಟ್‌ವರ್ಕ್ ಆಸ್ಪತ್ರೆಗಳು ಬಿಲ್ಲುಗಳು ಸಲ್ಲಿಸಿದ 1 ತಿಂಗಳೊಳಗೆ ಅವುಗಳನ್ನು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ. ಮೊದಲನೇ ಕಂತಿನ ಬಿಲ್ ಅನ್ನು ಫೆಬ್ರವರಿ 15ರೊಳಗೆ ಪಾವತಿ ಮಾಡಲು ಉದ್ದೇಶಿಸಲಾಗಿದೆ. ತದನಂತರ ಮುಂದಿನ ಬಿಲ್‌ಗಳನ್ನು ಪ್ರತಿ ತಿಂಗಳು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಫೆ. 13 ರಿಂದ ಬೆಂಗ್ಳೂರಲ್ಲಿ ಏರ್ ಶೋ – LCA Tejas ಪ್ರಮುಖ ಆಕರ್ಷಣೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k