ರಾಯಚೂರು: ಬೈಕ್‌ನಲ್ಲಿ ಹೊರಟಿದ್ದಾಗ ಬೃಹತ್ ಮರವೊಂದು ಉರುಳಿ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ನಡೆದಿದೆ.
ರಮೇಶ್(25), ಅನಸೂಯ(22) ಮೃತ ದಂಪತಿ. ಪುತ್ರಿಯನ್ನು ಸೌಜನ್ಯ (3) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆ| ಸಂಸತ್ತಿನಲ್ಲಿ ಎನ್‌ಡಿಎ, ವಿಪಕ್ಷಗಳ ಬಲ ಎಷ್ಟಿದೆ?
ದಂಪತಿ ತಮ್ಮ ಮಗುವಿನ ಜೊತೆಗೆ ಬೈಕ್‌ನಲ್ಲಿ ಮುದಗಲ್ ಪಟ್ಟಣದಿಂದ ನಾಗಲಾಪೂರ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬೃಹತ್ ಬಸರಿ ಮರವೊಂದು ಗಾಳಿಗೆ ಬುಡ ಸಮೇತ ಬೈಕ್ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದರು ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸದ್ಯ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ಕಳ್ಳಾಟ: ರಾಹುಲ್ ಗಾಂಧಿ ಆರೋಪ