ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗಿದ್ದು (Bengaluru Rains), ಭಾರೀ ಅವಾಂತರಗಳನ್ನೂ ಸೃಷ್ಟಿಸಿದೆ. ಭಾರೀ ಮಳೆಗೆ ಆಕಾಶದೆತ್ತರಕ್ಕೆ ಬೆಳೆದಿದ್ದ ಮರಗಳು ನೆಲ ಕಚ್ಚಿವೆ. ಆಟೋ, ಕಾರು, ಮನೆಗಳ ಮೇಲೆ ಬಿದ್ದು ಜಖಂ ಆಗಿವೆ.
ಬಸವೇಶ್ವರನಗರದ 17ನೇ ಕ್ರಾಸ್ ಬಳಿ ಮನೆ ಮುಂದೆ ಕಾರು ಪಾರ್ಕ್ ಮಾಡಿದ್ದ ಕಾರಿನ (Car) ಮೇಲೆ ಮರ ಬಿದ್ದಿದ್ದು, ರಸ್ತೆಯಲ್ಲಿ ವಾಹನಗಳು ಓಡಾಡದ ಪರಿಸ್ಥಿತಿ ನಿರ್ಮಾಣ ಆಗಿದೆ. ಮಳೆ ಬಂದು ನಿಂತರೂ ಹಲವೆಡೆ ಮನೆಯಲ್ಲೇ ಗೃಹಬಂಧನವಾಗಿ ಇರಬೇಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಬಸವೇಶ್ವರ ನಗರದ (Basaveshwaranagara) ಶಾರದಾ ಕಾಲೋನಿಯ ಬಳಿ ಬೃಹತ್ ಮರ ಮನೆ ಮೇಲೆ ಬಿದ್ದಿದೆ.
ಬೃಹತ್ ಮರವೊಂದು ಎರಡಂತಸ್ತಿನ ಕಟ್ಟಡದ ಮೇಲೆ ಬಿದ್ದಿದೆ, ಜೊತೆಗೆ ಸ್ಯಾಂಟ್ರೋ ಕಾರಿನ ಮೇಲೆ ಬಿದ್ದು ಜಖಂ ಆಗಿದೆ. ರಸ್ತೆ ಉದ್ದಕ್ಕೂ ಏಳೆಂಟು ಮರಗಳು ಬಿದ್ದಿವೆ. ಇದನ್ನೂ ಓದಿ: Election Results – ಟ್ರೆಂಡ್ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ
ನಗರದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಮೆಗಳು ಧರೆಗುರುಳಿವೆ. ಕರ್ನಾಟಕ ಲೇಔಟ್, ಬೆಮೆಲ್ ಲೇಔಟ್, ಕಿರ್ಲೋಸ್ಕರ್ ಕಾಲೋನಿ ಹಾಗೂ ಕುರುಬರಹಳ್ಳಿ ಮೇನ್ ರೋಡ್ ನಲ್ಲಿ ಮರಗಳು ಬಿದ್ದಿದ್ದು, ಬೆಳ್ಳಂ ಬೆಳಗ್ಗೆ ಬಿಬಿಎಂಪಿ ಹಾಗೂ ಬೆಸ್ಕಾಂ ಅಧಿಕಾರಿಗಳು ತೆರವುಗೊಳಿಸುವ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನ ಕಮಲಾನಗರದ ವಾಟರ್ ಟ್ಯಾಂಕ್ ಮುಖ್ಯ ರಸ್ತೆಯಲ್ಲಿಯೂ ಮರಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಾಸಕ ಕೆ. ಗೋಪಾಲಯ್ಯ ಸಹ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬುರ್ಖಾ ವಿದ್ಯಾರ್ಥಿನಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ: ಪ್ರತಾಪ್ ಸಿಂಹ