ಚಾಮರಾಜನಗರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿರುವ ಬೀದರ್‌ನಿಂದ (Bidar) ಚಾಮರಾಜನಗರದವರೆಗೆ (Chamarajnagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧ್ವಜವನ್ನು ಹಿಡಿದು ಏಕತೆಯ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ್ದಾರೆ.
Advertisement
ಚಾಮರಾಜನಗರ ಮತ್ತು ಮೈಸೂರು (Mysuru) ಗಡಿ ಭಾಗವಾದ ಮೂಗೂರು ಕ್ರಾಸ್‌ನಲ್ಲಿ ಆರಂಭಗೊಂಡ ಮಾನವ ಸರಪಳಿ ಚಾಮರಾಜನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ ಬಳಿ ಕೊನೆಗೊಂಡಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮಾನವ ಸರಪಳಿ ಹಾದು ಹೋಗಿದ್ದ ಮಾರ್ಗದಲ್ಲಿ ಭಾರತದ ಒಂದೊಂದು ರಾಜ್ಯದ ಸಾಂಸ್ಕೃತಿಕ ಧಿರಿಸು ಧರಿಸಿ ವಿವಿಧೆತೆಯಲ್ಲಿ ಏಕತೆಯನ್ನು ಮೆರೆದಿದ್ದಾರೆ.ಇದನ್ನೂ ಓದಿ: ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಾರಿಯಲ್ಲಿ ಸಾಗುತ್ತಿದೆ: ಸಿಎಂ
Advertisement
Advertisement
ಮಾನವ ಸರಪಳಿಯ ಪ್ರಮುಖ ವೃತ್ತಗಳಲ್ಲಿ ಜಾನಪದ ನೃತ್ಯ ಪ್ರಸ್ತುತ ಪಡಿಸಲಾಯಿತು. ಸೋಲಿಗರ ಗೊರುಕನ, ಜೇನುಕುರುಬರ ನೃತ್ಯ, ಗೊರವರ ಕುಣಿತ, ಹುಲಿ ವೇಷ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಗಮನ ಸೆಳೆದವು. ಪ್ರಜಾಪ್ರಭುತ್ವದ ಸಂಭ್ರಮಾಚರಣೆ ಹಿನ್ನೆಲೆ ಸರ್ಕಾರಿ ನೌಕರರು, ಕಾಲೇಜಿನ ಉಪನ್ಯಾಸಕರು, ಸಾರ್ವಜನಿಕರು, ರೈತರು, ಕನ್ನಡಪರ ಹೋರಾಟಗಾರರು ಪ್ರತಿನಿಧಿಸಿದರು. ಮಹಿಳೆಯರು ಹಸಿರು ಸೀರೆ, ಪುರುಷರು ಬಿಳಿ ಪಂಚೆ, ಶರ್ಟ್, ಶಲ್ಯ ಧರಿಸಿ ಮಿಂಚಿದರು. ರೈತರು ಹಸಿರು ಟವೆಲ್, ಕನ್ನಡಪರ ಹೋರಾಟಗಾರರು ನಾಡ ಧ್ವಜ, ಹೋರಾಟಗಾರರು ನೀಲಿ ಶಲ್ಯ ಹೊದ್ದಿದ್ದರು. ರಾಮಸಮುದ್ರದಲ್ಲಿ 1 ಕಿಮೀ ಉದ್ದದ ಭಾರತ ಧ್ವಜ ಹಿಡಿದು ರಾಷ್ಟ್ರಗೀತೆ ಹಾಡಿದ್ದು ಎಲ್ಲರ ಮನ ಗೆದ್ದಿತು. ಗಡಿ ಜಿಲ್ಲೆ ಚಾಮರಾಜನಗರಲ್ಲಿ 25 ಕಿಮೀ ಉದ್ದದ ಮಾನವ ಸರಪಳಿ 19,700 ಮಂದಿ ಸೇರುತ್ತಾರೆ ಎನ್ನಲಾಗಿತ್ತು. ಆದರೆ, ಜಿಲ್ಲಾಡಳಿತದ ನಿರೀಕ್ಷೆ ಹುಸಿಯಾಗಿ ಮಾನವ ಸರಪಳಿ ಅಲ್ಲಲ್ಲಿ ನಿರೀಕ್ಷಿತ ಪ್ರಮಾಣದ ಜನರು ಸೇರದೇ ಇದ್ದದ್ದು ಕಂಡುಬಂದಿತು.ಇದನ್ನೂ ಓದಿ: ‘ಗಿಚ್ಚಿ ಗಿಲಿಗಿಲಿ’ ಫಿನಾಲೆಯಲ್ಲಿ ರಿವೀಲ್ ಆಗ್ತಿದೆ Bigg Boss ಬಿಗ್ ಅಪ್‌ಡೇಟ್- ಏನದು?