ನವದೆಹಲಿ: ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಕ್ಕೆ ಮಾನವ ಲೋಪವೇ (ವಿಮಾನ ಸಿಬ್ಬಂದಿ) ಕಾರಣ ಎಂದು ರಕ್ಷಣಾ ಸ್ಥಾಯಿ ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರು 2021ರ ಡಿಸೆಂಬರ್ 8 ರಂದು ಪ್ರಯಾಣಿಸುತ್ತಿದ್ದ Mi-17 V5 ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಅಪಘಾತದಲ್ಲಿ ಜನರಲ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಒಟ್ಟು 12 ಜನರು ಸಾವನ್ನಪ್ಪಿದರು. ತಮಿಳುನಾಡಿನ ಕೂನೂರು ಬಳಿಯ ಪರ್ವತಗಳಲ್ಲಿ ಹೆಲಿಕಾಪ್ಟರ್ ಪತನಗೊಂಡಿತ್ತು.
Advertisement
ಮೂರು ವರ್ಷಗಳ ನಂತರ, ನಿನ್ನೆ ಹಿಂದಿನ ದಿನ ಲೋಕಸಭೆಯಲ್ಲಿ ಮಂಡಿಸಲಾದ ರಕ್ಷಣಾ ಸ್ಥಾಯಿ ಸಮಿತಿಯ ವರದಿಯು Mi-17 ಅಪಘಾತವು ‘ಮಾನವ ದೋಷ (ಏರ್‌ಕ್ರೂ)’ ಕಾರಣದಿಂದಾಗಿ ಸಂಭವಿಸಿದೆ ಎಂದು ಹೇಳಿದೆ.
Advertisement
2017 ರಿಂದ 2022 ರ ವರೆಗೆ ಭಾರತೀಯ ವಾಯು ಸೇನೆಯಲ್ಲಿ ಒಟ್ಟು 34 ಅಪಘಾತಗಳು ಸಂಭವಿಸಿವೆ ಎಂದು 18 ನೇ ಲೋಕಸಭೆಯ ಸ್ಥಾಯಿ ಸಮಿತಿ ವರದಿ ಹೇಳಿದೆ. 2021-2022 ಅವಧಿಯಲ್ಲಿ ಒಟ್ಟು ಒಂಬತ್ತು ಅಪಘಾತಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ.