ಬೆಂಗಳೂರು: ಶಿಕ್ಷಣದಲ್ಲಿ ಸಾಂಸ್ಕೃತಿಕ ಮತ್ತು ಮಾನವೀಯ ಮೌಲ್ಯಗಳನ್ನು ಸೇರಿಸುವುದು ಶಿಕ್ಷಣ ತಜ್ಞರು, ಮಾನವತಾವಾದಿಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯಪಾಲ(Governor) ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಹೇಳಿದ್ದಾರೆ.
ನಗರದ ಸೆಂಟ್ರಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು (Bengaluru) ನಗರ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ತಾಂತ್ರಿಕ ಅಭಿವೃದ್ಧಿಗಾಗಿ ಸಾಂಸ್ಕೃತಿಕ ಹಾಗೂ ಮಾನವೀಯ ಮೌಲ್ಯಗಳನ್ನು ಶಿಕ್ಷಣದ ಜೊತೆಗೆ ನೀಡುವುದು ಈ ದಿನದ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ನಮ್ಗೆ ಕಾರ್ ಪಾರ್ಕಿಂಗ್ ಮಾಡೋಕೆ ಸ್ಥಳ ಸಿಕ್ತಿಲ್ಲ – ಪರಿಷತ್ ನಲ್ಲಿ ಶಾಸಕರ ಅಳಲು
Advertisement
Advertisement
ವಿಶ್ವವಿದ್ಯಾನಿಲಯಗಳು ಸಾಮಾಜಿಕ ಸಂಪ್ರದಾಯದ ಸಂಶೋಧನೆಯನ್ನು ಉತ್ತೇಜಿಸುತ್ತವೆ. ಸಮಾಜಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಮಾನವಕುಲಕ್ಕೆ ಹವಾಮಾನ ಬದಲಾವಣೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುತ್ತವೆ. ಹಾಗೆಯೇ ಸರಳವಾದ ಜೀವನಶೈಲಿಯ ಮಾದರಿಗಳ ಬಗ್ಗೆ ಯೋಚಿಸುವ ಅವಶ್ಯಕತೆಯಿದೆ. ವಿಶೇಷವಾಗಿ ಬಡವರ, ಅತ್ಯಂತ ದುರ್ಬಲರ ಹಾಗೂ ನಮ್ಮ ಪರಿಸರದ ಕಾಳಜಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ.
Advertisement
ಪ್ರಸ್ತುತ, ಸ್ವಾವಲಂಬಿ ಮತ್ತು ಬಲಿಷ್ಠ ಭಾರತದ ಬಗ್ಗೆ ಗಮನಾರ್ಹ ಚರ್ಚೆಯಾಗುತ್ತಿದೆ. ಇಂತಹ ಸಮಯದಲ್ಲಿ ಡಿಜಿಟಲ್ ಚಟುವಟಿಕೆಗಳನ್ನು ಉತ್ತೇಜಿಸಲು ತಂತ್ರಜ್ಞಾನವನ್ನು ಸರಳ ಮತ್ತು ವೈಶಿಷ್ಟ್ಯಗಳಿಂದ ಸಮೃದ್ಧಗೊಳಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕೆಲಸಗಳು ನಡೆಯುವ ಅಗತ್ಯ ಇದೆ ಎಂದು ಅವರು ತಿಳಿಸಿದ್ದಾರೆ.
Advertisement
ಪ್ರತಿಭಾವಂತ ವಿದ್ಯಾರ್ಥಿಗಳು ಆದರ್ಶ ಸಮಾಜದ ರಚನೆಯ ಆಧಾರ ಸ್ತಂಭಗಳಾಗಿದ್ದಾರೆ. ವಿದ್ಯಾರ್ಥಿಗಳ ಕೆಲಸ, ನಡವಳಿಕೆ ಮತ್ತು ಆಲೋಚನೆಯನ್ನು ಸಮಾಜದ ಸಿದ್ಧಾಂತ, ಸಂಸ್ಕೃತಿ ಮತ್ತು ನಾಗರಿಕತೆಯೊಂದಿಗೆ ಜೋಡಿಸಬೇಕು. ಅಂತಹ ಹೊಸ ಆಲೋಚನೆಗಳು, ಹೊಸ ಪ್ರಯೋಗಗಳಿಗೆ ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿ ವಾತಾವರಣವನ್ನು ಸೃಷ್ಟಿಸುವುದು ಉನ್ನತ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದಿದ್ದಾರೆ.
ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳು ಬಹಳ ಪುರಾತನವಾಗಿದೆ. ಅಲ್ಲದೇ `ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ’ ಎಂಬ ಮನೋಭಾವದಿಂದ ಪ್ರೇರಿತವಾದ `ವಸುಧೈವ ಕುಟುಂಬಕಂ’ ತತ್ವವನ್ನು ಒಳಗೊಂಡಿದೆ. ಧ್ಯಾನವನ್ನು ಕೇಂದ್ರೀಕರಿಸಿ, ಸಾರ್ವತ್ರಿಕ ಸಹೋದರತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ವಿಶ್ವಕ್ಕೆ ಸಾರಿದೆ ಎಂದಿದ್ದಾರೆ.
ಪ್ರಾಚೀನ ಶಿಕ್ಷಣ ಪದ್ಧತಿಯು ವ್ಯಕ್ತಿತ್ವ ನಿರ್ಮಾಣ, ಆಧ್ಯಾತ್ಮಿಕ ಜ್ಞಾನದ ಜೊತೆಗೆ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯ ಮೇಲೆ ಕೇಂದ್ರೀಕೃತವಾಗಿತ್ತು. ಇದರಿಂದಾಗಿ ನಾವು ವಿಶ್ವಗುರು ಎಂದು ಪರಿಗಣಿಸಲ್ಪಟ್ಟಿದ್ದೆವು. ಸ್ವಾತಂತ್ರ್ಯದ 75 ವರ್ಷಗಳಲ್ಲಿ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ದೇಶದ ಆರ್ಥಿಕತೆಯು ಹೆಚ್ಚು ಬಲಗೊಂಡಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಮುಂದಿನ 25 ವರ್ಷಗಳು ಅಮೃತ ಕಾಲ. ನಮ್ಮ ದೇಶವನ್ನು ವಿಶ್ವದ ಅತ್ಯುತ್ತಮ ದೇಶಗಳ ವರ್ಗಕ್ಕೆ ತರುವ ಕರ್ತವ್ಯದ ಅವಧಿಯಾಗಿದೆ. ಈ ಕರ್ತವ್ಯದ ಅವಧಿಯನ್ನು ಅವಕಾಶವನ್ನಾಗಿ ಪರಿವರ್ತಿಸುವಲ್ಲಿ ನಾವು ಪಾಲುದಾರರಾಗಿರಬೇಕು ಎಂದಿದ್ದಾರೆ.
ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅತ್ಯುತ್ತಮ ಕೆಲಸ ಮಾಡಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಸಾಧಕರಾದ ನಿಸ್ಸಾರ್ ಅಹಮದ್, ಡಾ.ವೂಡೆ ಪಿ ಕೃಷ್ಣ, ತಾರಿಣಿ ಚಿದಾನಂದ ಅವರಿಗೆ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಸಿ.ಎನ್.ಮಂಜುನಾಥ್, ಕುಲಪತಿ ಲಿಂಗರಾಜು ಗಾಂಧಿ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ ಹಾರಾಡ್ತಿದೆ: ಯತ್ನಾಳ್ ಕಿಡಿ
Web Stories