ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಮಲೆಮಹದೇಶ್ವರ ಸ್ವಾಮಿ (Male Mahadeshwara Hill) ದೇವಾಲಯ ಹುಂಡಿಯಲ್ಲಿ (Hundi) 2.50 ಕೋಟಿ ರೂಪಾಯಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.
Advertisement
ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಎಣಿಕೆ ನಡೆಸಲಾಯಿತು. ಈ ವೇಳೆ ಹುಂಡಿಯಲ್ಲಿ 2.50 ಕೋಟಿ ರೂಪಾಯಿಗು ಹೆಚ್ಚು ಹಣ ಸಂಗ್ರಹವಾಗಿದೆ. ತಡರಾತ್ರಿವರೆಗೂ ನಡೆದ ಹುಂಡಿ ಎಣಿಕೆ ನಡೆದಿದ್ದು, 2,50,85,794 ರೂಪಾಯಿ ನಗದು, 122 ಗ್ರಾಂ ಚಿನ್ನ, 2.71 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ. ಕಳೆದ 36 ದಿನಗಳ ಅವಧಿಯಲ್ಲಿ ಭಕ್ತರು ಸಲ್ಲಿಸಿದ ಕಾಣಿಕೆ ಇದಾಗಿದ್ದು, 14 ಲಕ್ಷ ರೂಪಾಯಿಗೂ ಹೆಚ್ಚು ಹಣ ನಾಣ್ಯದ ರೂಪದಲ್ಲಿ ಕಾಣಿಕೆಯನ್ನು ಭಕ್ತರು ಸಲ್ಲಿಸಿದ್ದಾರೆ. ಇದನ್ನೂ ಓದಿ: ಗುಜರಾತ್ ಚುನಾವಣೆ – ಮಾಜಿ ಪತ್ರಕರ್ತ, ಟಿವಿ ಆ್ಯಂಕರ್ ಇಸುದನ್ ಗಧ್ವಿ ಎಎಪಿ ಸಿಎಂ ಅಭ್ಯರ್ಥಿ
Advertisement
Advertisement
ಇತ್ತೀಚೆಗಷ್ಟೇ ಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಹಾಗು ಎಸ್‍ಬಿಐ ಸಹಯೋಗದಲ್ಲಿ ಮಾದಪ್ಪನ ಸನ್ನಿಧಿಯಲ್ಲಿ ಇ- ಹುಂಡಿ ಸ್ಥಾಪಿಸಿದೆ. ಭಕ್ತರು ಕ್ಯೂಆರ್ ಕೋಡ್ ಬಳಕೆ ಮಾಡಿ ದೇವರಿಗೆ ಕಾಣಿಕೆ ಅರ್ಪಿಸಬಹುದಾಗಿದೆ. ಇದನ್ನೂ ಓದಿ: ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದ್ರೆ ಬಿಜೆಪಿಯವರಿಗೇನು ನೋವು?: ಡಿ.ಕೆ. ಶಿವಕುಮಾರ್
Advertisement
ಇ-ಹುಂಡಿಗೆ ಸಂಪೂರ್ಣ ಭದ್ರತೆ ವಹಿಸಲಾಗಿದೆ. ವರ್ಷಕ್ಕೆ ಮೂರು ಬಾರಿ ನಡೆಯವ ಜಾತ್ರೆ ಹಾಗು ಪ್ರತಿ ಅಮಾವಾಸ್ಯೆ ಸೇರಿದಂತೆ ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ಮಹದೇಶ್ವರನ ಸನ್ನಿಧಿಗೆ ಬರುತ್ತಾರೆ. ದೇವಾಲಯ ಒಳಾಂಗಣದಲ್ಲಿ ಹುಂಡಿಗಳನ್ನು ಇಡಲಾಗಿದ್ದು, ಭಕ್ತರು ಹುಂಡಿಗಳಲ್ಲೇ ಹಾಕಿ ತಮ್ಮ ಕಾಣಿಕೆ ಸಲ್ಲಿಸಬೇಕಿತ್ತು. ನೂಕು ನುಗ್ಗಲಿನ ಕಾರಣ ಕಾಣಿಕೆ ಸಲ್ಲಿಸಲು ಸಹ ಹಲವು ರೀತಿಯ ಅಡಚಣೆಗಳು ಎದುರಾಗುತ್ತಿದ್ದವು. ಆದರೀಗ ಇ-ಹುಂಡಿ ಸ್ಥಾಪನೆ ಮಾಡಲಾಗಿದ್ದು, ಈ ಮೂಲಕ ಕೂಡ ಭಕ್ತರು ಕಾಣಿಕೆಯನ್ನು ಸಲ್ಲಿಸಬಹುದಾಗಿದೆ.