ಅಮರಾವತಿ: ತಿರುಮಲದಲ್ಲಿರುವ (Tirumala) ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ.ಇದನ್ನೂ ಓದಿ: ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ
2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ಸಲಕ್ಕಿಂತ 4.09 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಮೂಲಗಳು ತಿಳಿಸಿವೆ.
ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ತೆರೆದಿದ್ದರೂ ಕೂಡ ಜುಲೈನಲ್ಲಿ ಭಕ್ತರ ಬರುವಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. ಈ ವರ್ಷ ಇಲ್ಲಿಯವರೆಗೆ 23.76 ಲಕ್ಷ ಭಕ್ತರು ತಿರುಪತಿಗೆ ಆಗಮಿಸಿ, ದರ್ಶನ ಪಡೆದುಕೊಂಡಿದ್ದಾರೆ. ಟಿಟಿಡಿ ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ವರ್ಷಕ್ಕಿಂತ ಈ ವರ್ಷ ಭಕ್ತರ ಸಂಖ್ಯೆಯಲ್ಲಿ ಶೇ.7.4ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬಹುನಿರೀಕ್ಷಿತ ಯೆಲ್ಲೋ ಲೈನ್ ಮೆಟ್ರೋ ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತ