ರಾಮನಗರ: ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಚನ್ನಪಟ್ಟಣದ (Channapatna) ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಡಿಕೆಶಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ. ಬಿಜೆಪಿಯಲ್ಲಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಗೊತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಗುಂಪು ಗುಂಪಾಗಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಎಲ್ಲೋ ಹಳ್ಳಿಗಳಲ್ಲಿ ಭಿನ್ನಾಭಿಪ್ರಾಯದಿಂದ ಒಂದಿಬ್ಬರು ಮಾತ್ರ ನಮ್ಮ ಪಕ್ಷ ಬಿಟ್ಟಿರಬಹುದು ಎಂದರು. ಇದನ್ನೂ ಓದಿ: IPL Retention | ಹೊಸ ಮುಖಗಳಿಗೆ ಪಂಜಾಬ್ ಕಿಂಗ್ಸ್ ಮಣೆ – ಸ್ಟಾರ್ ಆಟಗಾರರು ಹೊರಕ್ಕೆ
ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನರಿಗೆ ಒಳ್ಳೆಯದಾಗಲು ಸಾಧ್ಯ ಎಂದು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಶ್ಚಿಮ ಘಟ್ಟವನ್ನು ಕಾಶ್ಮೀರವಾಗಿಸಿದ ಮಳೆಯ ಮಂಜು
ಈ ಸರ್ಕಾರ ಆತ್ಮಹತ್ಯೆ ಮಾಡಿಕೊಳ್ಳಲಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ ಮಾತಿಗೆ ಉತ್ತರ ನೀಡುವುದಿಲ್ಲ. ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ ಎಂದು ಟೀಕಿಸಿದರು. ಇದನ್ನೂ ಓದಿ: ತೊಗರಿ ಆರೋಗ್ಯ ಸಮೀಕ್ಷೆ ಕಾರ್ಯಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ
ಚನ್ನಪಟ್ಟಣದಲ್ಲಿ ಭಾವನಾತ್ಮಕವಾಗಿ ಮತ ಸೆಳೆಯಲಾಗುತ್ತಿದೆ ಎಂಬ ವಿಚಾರದ ಕುರಿತು ಮಾತನಾಡಿ, ಭಾವನೆ ಮೇಲೆ ಮತ ಕೇಳುವುದಲ್ಲ. ಬದುಕಿನ ಮೇಲೆ ಮತ ಕೇಳಬೇಕು. ಅವರು ಭಾವನೆ ಮೇಲೆ ಮತ ಕೇಳಿದರೆ, ನಾವು ಬದುಕಿನ ಮೇಲೆ ಮತ ಕೇಳುತ್ತೇವೆ. ಜನರ ಬದುಕು, ಅವರ ಅಭಿವೃದ್ಧಿ ನಮಗೆ ಮುಖ್ಯ. ಕೆರೆಗೆ ನೀರು ತುಂಬಿಸುವುದು, ರಸ್ತೆ, ಮನೆಗಳು, ನಿವೇಶನ ನೀಡುವುದು ಮುಖ್ಯ ಎಂದು ಹೇಳಿದರು. ಇದನ್ನೂ ಓದಿ: ಭಾರತದ ಭೂಮಿಯ ಮೇಲೆ ಒಂದಿಂಚೂ ಕಾಂಪ್ರಮೈಸ್ ಮಾಡಲ್ಲ: ಮೋದಿ ಭರವಸೆ