ಮೈಸೂರು: ಆಷಾಢ ಮಾಸದ (Ashada Masa) ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ (Chamundi Hill) ಸಡಗರ-ಸಂಭ್ರಮ ಮನೆ ಮಾಡಿದೆ. ಕೊನೆಯ ಆಷಾಢ ಶುಕ್ರವಾರವಾದ ಕಾರಣ ನಾಡ ಅದಿದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.
ನಾಡ ಅದಿದೇವತೆಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣವನ್ನೂ ವಿಶೇಷ ಹೂಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 3 ಗಂಟೆಯಿಂದಲೇ ರಾಜ್ಯದ ನಾನಾ ಕಡೆಗಳಿಂದ ಆಗಮಿಸುತ್ತಿರುವ ಭಕ್ತರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕೌಂಟ್ಡೌನ್
Advertisement
Advertisement
ಆಷಾಢ ಮಾಸದ ಕೊನೆ ಶುಕ್ರವಾರವಾದ ಇಂದು ಬೆಳಗ್ಗೆ 5:30 ರಿಂದ ಭಕ್ತರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಚಾಮುಂಡಿ ತಾಯಿಗೆ ಮುಂಜಾನೆಯೇ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ನಂತರ ಮಹಾಮಂಗಳಾರತಿ ಮಾಡಲಾಗಿದೆ.
Advertisement
Advertisement
ಬೆಳಗ್ಗೆ 5:30 ರಿಂದ ರಾತ್ರಿ 11 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕೆ 300 ರೂ. ಹಾಗೂ 50 ರೂ. ಟಿಕೆಟ್ ದರವಿದೆ. ಮೆಟ್ಟುಲುಗಳ ಮೂಲಕ ಚಾಮುಂಡಿ ತಾಯಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಇದನ್ನೂ ಓದಿ: KMDC ಸಾಲ ವಸೂಲಾತಿ 50% ಪ್ರಗತಿ ತೋರಿಸಲು ಸಚಿವ ಜಮೀರ್ ಟಾರ್ಗೆಟ್!
Web Stories