ಟೆಹ್ರಾನ್: ಹಿಜಬ್ ವಿರೋಧಿಸಿ ವ್ಯಾಪಕ ಪ್ರತಿಭಟನೆಗಳಿಂದ (Hijab Protest) ತತ್ತರಿಸಿಹೋಗಿರುವ ಇರಾನ್ (Iran) ದೇಶದಲ್ಲಿ ಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ.
ಹೆಣ್ಣುಮಕ್ಕಳ ಶಿಕ್ಷಣ (Girls Education) ಸ್ಥಗಿತಗೊಳಿಸುವ ಉದ್ದೇಶದಿಂದ ಪವಿತ್ರ ನಗರವಾದ ಕೋಮ್‌ನಲ್ಲಿ (Qom City) ಕೆಲ ಕಿಡಿಗೇಡಿಗಳು ಶಾಲಾ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ ಎಂದು ಇರಾನ್ ಆರೋಗ್ಯ ಸಚಿವರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಈ ವರ್ಷದಲ್ಲೇ ಮೋದಿ ಪಾಕಿಸ್ತಾನವನ್ನ ಸಂಕಷ್ಟದಿಂದ ಪಾರು ಮಾಡ್ತಾರೆ – RAW ಮಾಜಿ ನಿರ್ದೇಶಕ
Advertisement
Advertisement
2022ರ ನವೆಂಬರ್ ಅಂತ್ಯದ ವೇಳೆಗೆ ಟೆಹ್ರಾನ್‌ನ ದಕ್ಷಿಣದ ಕೋಮ್‌ನಲ್ಲಿ ಶಾಲಾ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದಿದೆ. ಮಕ್ಕಳ ಉಸಿರಾಟದಲ್ಲಿ ವಿಷಕಾರಿ ಅಂಶ ಇರುವುದು ಪತ್ತೆಯಾಗಿದ್ದು, ಈಗ ಆರೋಗ್ಯ ಸಚಿವ ಯುನೆಸ್ ಪನಾಹಿ, ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
Advertisement
ಕೋಮ್ ನಗರದ ಶಾಲೆಗಳಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ವಿಷಪ್ರಾಶನ ಮಾಡಿಸಿರುವುದು ಕಂಡುಬಂದನಂತರ ಎಲ್ಲಾ ಶಾಲೆಗಳನ್ನು ಮುಚ್ಚಬೇಕೆಂಬ ಒತ್ತಾಯ ಕೇಳಿಬಂದಿದೆ. ಅದರಲ್ಲೂ ಬಾಲಕಿಯರ ಶಾಲೆಗಳನ್ನು ಮುಚ್ಚಲೇಬೇಕೆಂದು ಕೆಲವರು ಪಟ್ಟುಹಿಡಿದಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
Advertisement
ಈ ಬಗ್ಗೆ ತನಿಖೆ ಆರಂಭಗೊಂಡಿದ್ದರೂ ಇಲ್ಲಿಯವರೆಗೆ ಯಾರೊಬ್ಬರ ಬಂಧನವಾಗಿಲ್ಲ ಎಂದು ಹೇಳಲಾಗಿದೆ. ಇದನ್ನೂ ಓದಿ: ಸಾವಿರಾರು ಮೈಲಿ ದೂರವಿದ್ದರೂ ಸಿಗುತ್ತೆ ನೈಜ ಮುತ್ತಿನ ಗಮ್ಮತ್ತು – ಏನಿದು ಕಿಸ್ಸಿಂಗ್ ಡಿವೈಸ್ ಕರಾಮತ್ತು?
ಇದೇ ಫೆಬ್ರವರಿ 14ರಂದು ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಗಳ ಪೋಷಕರು ರಾಜ್ಯಪಾಲರ ಮನೆ ಹೊರಗೆ ಜಮಾಯಿಸಿ ಅಧಿಕಾರಿಗಳಿಂದ ವಿವರಣೆ ಕೊಡುವಂತೆ ಆಗ್ರಹಿಸಿದ್ದರು. ಇದಾದ ಮರುದಿನ ಸರ್ಕಾರದ ವಕ್ತಾರ ಅಲಿ ಬಹದೋರಿ ಜಹ್ರೋಮಿ, ಗುಪ್ತಚರ ಮತ್ತು ಶಿಕ್ಷಣ ಸಚಿವಾಲಯಗಳು ವಿಷ ಪ್ರಾಶನದ ಕಾರಣವನ್ನು ಪತ್ತೆಮಾಡಲು ಪ್ರಯತ್ನಿಸುತ್ತಿವೆ ಎಂದು ಹೇಳಿದ್ದರು.
ಈ ಸಂಬಂಧ ಕಳೆದ ವಾರ, ಪ್ರಾಸಿಕ್ಯೂಟರ್ ಜನರಲ್ ಮೊಹಮ್ಮದ್ ಜಾಫರ್ ಮೊಂಟಜೆರಿ ಘಟನೆಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದರು.