ಬೆಂಗಳೂರು: ಹನುಮ ಜಯಂತಿ (Hanuma Jayanthi) ಹಿನ್ನೆಲೆ ದೇವಾಲಯಗಳಲ್ಲಿ (Temples) ಪ್ರಸಾದ (Prasadam) ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ (Hoskote) ನಗರದಲ್ಲಿ ನಡೆದಿದೆ.
ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ ಅಂಗವಾಗಿ ಭಾನುವಾರ ಭಕ್ತರು ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿದ್ದರು. ಅಲ್ಲಿ ಪುಳಿಯೊಗರೆ, ಪಾಯಸ ಹಾಗೂ ಲಡ್ಡನ್ನು ಪ್ರಸಾದದ ರೂಪದಲ್ಲಿ ನೆರೆದಿದ್ದ ಭಕ್ತರು ಸೇವಿಸಿದ್ದಾರೆ. ಪ್ರಸಾದ ಸೇವನೆ ಬಳಿಕ ಭಕ್ತರಿಗೆ ವಾಂತಿ ಹಾಗೂ ಭೇದಿ ಪ್ರಾರಂಭವಾಗಿದ್ದು, ನೂರಾರು ಜನ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಭಕ್ತರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆ, ಕೋಲಾರ ಹಾಗೂ ಬೆಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದ 8 ಮಂದಿಯಲ್ಲಿ JN.1 ವೈರಸ್ ಪತ್ತೆ
Advertisement
Advertisement
ಇನ್ನು ಈ ಪ್ರಕರಣದಲ್ಲಿ ಹೊಸಕೋಟೆ ನಗರದ ಕಾವೇರಿ ನಗರ ನಿವಾಸಿ ಸಿದ್ದಗಂಗಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇಂದು ಬೆಳಗ್ಗೆ ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದು, ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ 15ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗೆಳತಿ ಮೇಲೆ ಪ್ರೀತಿ; ಲಿಂಗ ಬದಲಿಸಿಕೊಂಡ್ರೂ ಮದುವೆಗೆ ಒಪ್ಪದ ಮಹಿಳಾ ಟೆಕ್ಕಿಯನ್ನ ಜೀವಂತ ಸುಟ್ಟು ಹತ್ಯೆ
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆಯ ಖಾಸಗಿ ಆಸ್ಪತ್ರೆಗಳಲ್ಲಿ ಮೂರು ಠಾಣಾ ವ್ಯಾಪ್ತಿಯ ಜನರು ದಾಖಲಾಗಿದ್ದಾರೆ. ಅವಲಹಳ್ಳಿ, ನಂದಗುಡಿ ಹಾಗೂ ಹೊಸಕೋಟೆ ಠಾಣಾ ವ್ಯಾಪ್ತಿಯ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಸ್ವಸ್ಥತೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಠಾಣೆ ಪೊಲೀಸರು ಸದ್ಯ ಅಸ್ವಸ್ಥಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ತಾಲೂಕು ಆರೋಗ್ಯಾಧಿಕಾರಿಗಳಿಂದ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಂದ ಅಸ್ವಸ್ಥತೆಗೆ ಕಾರಣ ಏನು ಎಂಬ ಮಾಹಿತಿಯನ್ನು ತಾಲೂಕು ವೈದ್ಯಾಧಿಕಾರಿಗಳು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ತೆಗೆದುಕೊಳ್ತಿದ್ದಿದ್ದಕ್ಕೆ ರಿಲೇಷನ್‍ಶಿಪ್ ಬೇಡ ಎಂದಿದ್ದೇನೆ: ಕಾರಿಯಪ್ಪ
Advertisement
ಈ ಕುರಿತು ಹೊಸಕೋಟೆ ಪ್ರಭಾರ ಟಿಹೆಚ್‌ಒ ಡಾ. ಸುಮಾ ಮಾಹಿತಿ ನೀಡಿದ್ದು, ಸುಮಾರು ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ 80ಕ್ಕೂ ಹೆಚ್ಚು ಜನ ದಾಖಲಾಗಿದ್ದಾರೆ. ಎಲ್ಲಾ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಇದರ ಬಗ್ಗೆ ಕಾರಣ ಏನು ಎಂಬುದು ಲ್ಯಾಬ್ ವರದಿ ಬಳಿಕ ಗೊತ್ತಾಗಲಿದೆ. ನೀರಿನಿಂದ ಅಥವಾ ಕೆಲವು ದೇವಸ್ಥಾನಗಳಲ್ಲಿ ಪ್ರಸಾದ ಸೇವನೆ ಮಾಡಿರುವ ಬಗ್ಗೆ ಮಾಹಿತಿ ಬಂದಿದೆ. ಇದರ ಬಗ್ಗೆ ಪರಿಶೀಲನೆ ಆಗುತ್ತಿದೆ ಎಂದರು. ಇದನ್ನೂ ಓದಿ: ಆಕ್ಸಿಡೆಂಟ್ ಆಗಿ ಕಟ್ ಆದ ತಲೆ ಮೂರೂವರೆ ಗಂಟೆ ಶೋಧದ ಬಳಿಕ ಸಿಕ್ತು..!
ಇನ್ನು ಸಿಲಿಕಾನ್ ಸಿಟಿ ಆಸ್ವತ್ರೆಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು (Health Department officials) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ನಾಗೇಶ್, ಶನಿವಾರ ಹಾಗೂ ಭಾನುವಾರ ಪ್ರಸಾದ ತಿಂದ ಹಿನ್ನೆಲೆ ಅಸ್ವಸ್ಥರಾಗಿರುವುದು ಪ್ರಾಥಮಿಕ ಮಾಹಿತಿಯಲ್ಲಿ ಕಂಡು ಬಂದಿದೆ. ಎಲ್ಲೆಲ್ಲಿ ಪ್ರಸಾದ ಸೇವಿಸಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ನೀರಿನಿಂದಲೂ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಎಲ್ಲಾ ಬಗ್ಗೆ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದೇವೆ. ಈಗಾಗಲೆ 80 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿರುವವರ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಅಗತ್ಯ ಬಿದ್ದಲ್ಲಿ ಹೆಚ್ಚಿನ ಬೆಡ್ ಹಾಗೂ ಅಂಬುಲೆನ್ಸ್‌ಗಳ ನಿಯೋಜನೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು- ಮೃತದೇಹಕ್ಕಾಗಿ ಶೋಧ