ಚೆನ್ನೈ: ಹಿಂದಿಯನ್ನು ಇಂಗ್ಲಿಷ್‍ಗೆ ಪರ್ಯಾಯವಾಗಿ ಸ್ವೀಕರಿಸುವುದು ಭಾರತದ ಏಕತೆಗೆ ಧಕ್ಕೆಯನ್ನು ತರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಟೀಕಿಸಿದರು.
ಹಿಂದಿಯನ್ನು ಇಂಗ್ಲಿಷ್‍ಗೆ ಪರ್ಯಾಯವಾಗಿ ಸ್ವೀಕರಿಸಬೇಕು ಮತ್ತು ಸ್ಥಳೀಯ ಭಾಷೆಗಳಿಗೆ ಅಲ್ಲ ಎಂದು ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ವಿರೋಧಿಸಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಗೃಹ ಸಚಿವರು ಇಂಗ್ಲಿಷ್ ಬದಲಿಗೆ ಹಿಂದಿ ಮಾತನಾಡುವ ರಾಜ್ಯಗಳು ಸಾಕು ಎಂದು ಭಾವಿಸುತ್ತಾರೆ. ಆದರೆ ಏಕ ಭಾಷೆಯು ಏಕತೆಗೆ ಸಹಾಯ ಮಾಡುವುದಿಲ್ಲ. ಬಿಜೆಪಿ ನಾಯಕತ್ವವು ಭಾರತದ ವೈವಿಧ್ಯತೆಯನ್ನು ಹಾಳು ಮಾಡುವ ಕೆಲಸವನ್ನು ಮುಂದುವರಿಸಿದೆ. ಇದನ್ನೂ ಓದಿ: ಪಿಎಂ ಸ್ಥಾನದಿಂದ ಇಮ್ರಾನ್ ಕೆಳಗಿಳಿದ್ರೆ ಪಾಕ್‌ನ ಮುಂದಿನ ಪ್ರಧಾನಿ ಇವರೇ
“ஆங்கிலத்துக்குப் பதிலாக இந்தியைப் பயன்படுத்துங்கள்” என்று ஒன்றிய உள்துறை அமைச்சர் @AmitShah சொல்வது இந்தியாவின் ஒருமைப்பாட்டுக்கு வேட்டு வைக்கும் செயல்!
இந்தியாவின் பன்முகத்தன்மையைப் பழுதாக்கும் வேலையை பாஜக தலைமை தொடர்ந்து செய்கிறது. (1/2)#StopHindiImposition
— M.K.Stalin (@mkstalin) April 8, 2022
ಭಾರತೀಯ ರಾಜ್ಯ ಸಾಕು, ಆದರೆ ಭಾರತದ ರಾಜ್ಯಗಳು ಬೇಕಾಗಿಲ್ಲ ಎಂದು ಅಮಿತ್ ಶಾ ಅವರು ಹೇಳಿದ್ದಾರೆ. ಆದರೆ ಏಕ ಭಾಷೆ ಏಕತೆಗೆ ಸಹಾಯ ಮಾಡುವುದಿಲ್ಲ ಹಾಗೂ ಏಕತೆಯನ್ನು ಸೃಷ್ಟಿಸುವುದಿಲ್ಲ. ನೀವು ಮತ್ತೆ ಮತ್ತೆ ಅದೇ ತಪ್ಪನ್ನು ಮಾಡುತ್ತೀರಿ. ಆದರೆ ನೀವು ಅದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬ್ರಿಟಿಷರಿಗೂ, ಬಿಜೆಪಿಗೂ ಯಾವುದೇ ವ್ಯತ್ಯಾಸವಿಲ್ಲ: ಹೆಚ್‍ಡಿಕೆ
ನವದೆಹಲಿಯಲ್ಲಿ ನಡೆದ ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಹಿಂದಿಯನ್ನು ಇಂಗ್ಲಿಷ್‍ಗೆ ಪರ್ಯಾಯವಾಗಿ ಸ್ವೀಕರಿಸಬೇಕು ಮತ್ತು ಸ್ಥಳೀಯ ಭಾಷೆಗಳಿಗೆ ಅಲ್ಲ ಎಂದಿದ್ದರು.