ಮೈಸೂರು: ಗಂಡು ಮಗುವಾಗಿಲ್ಲ ಎಂದು ಪಾಪಿ ಪತಿಮಹಾಶಯನೊಬ್ಬ ಪತ್ನಿ (Assault On Wife) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕು ಸೋನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ ಚಂದ್ರು, ಪತ್ನಿ ಶಿವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೂಡ ಕೇಳಿ ಬಂದಿದೆ. ಇದನ್ನೂ ಓದಿ: ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ
ಶಿವಮ್ಮ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಇದೇ ಕಾರಣವಾಗಿ ಶಿವಮ್ಮಗೆ ಪತಿ ಹಾಗೂ ಮನೆಯವರು ಮಾನಸಿಕ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಹಲವು ಬಾರಿ ನ್ಯಾಯ ಪಂಚಾಯ್ತಿ ಮಾಡಿದ್ರೂ ಪ್ರಯೋಜನವಾಗಿರಲಿಲ್ಲ. ಇತ್ತ ಕಿರುಕುಳ ತಾಳಲಾರದೆ ಶಿವಮ್ಮ ಕಳೆದ ವರ್ಷ ಎಚ್.ಡಿ.ಕೋಟೆ ಪೊಲೀಸರಿಗೆ ದೂರು ನೀಡಿದ್ದರು.
ಸದ್ಯ ಪತಿ ಚಂದ್ರುವನ್ನು ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಮಾವ ರಾಮೇಗೌಡ ಅತ್ತೆ ಕೆಂಪಮ್ಮಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆ (HD Kote Police Station) ಯಲ್ಲಿ ಪ್ರಕರಣ ದಾಖಲಾಗಿದೆ.