ChamarajanagarDistrictsKarnatakaLatestMain Post
ಪತ್ನಿಯನ್ನು ಹತೈಗೈದ ಪತಿಗೆ ಜೀವಾವಧಿ ಶಿಕ್ಷೆ – ಎರಡು ಲಕ್ಷ ದಂಡ

ಚಾಮರಾಜನಗರ: ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದ್ದು, ಎರಡು ಲಕ್ಷ ರೂ. ದಂಡ ವಿಧಿಸಿದೆ.
ಉತ್ತುವಳ್ಳಿ ಗ್ರಾಮದ ಮಂಜು ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಮದ್ಯ ವ್ಯಸನಿಯಾಗಿದ್ದ ಈತ ಪ್ರತಿದಿನ ಕುಡಿದು ಬಂದು ಪತ್ನಿ ಚಿನ್ನತಾಯಮ್ಮಳೊಂದಿಗೆ ಗಲಾಟೆ ಮಾಡುತ್ತಿದ್ದ. ಕುಡಿತದ ಬಗ್ಗೆ ಪ್ರಶ್ನಿಸಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ. ಈ ಘಟನೆಯು 2017 ರ ಅಕ್ಟೋಬರ್ 26 ರಂದು ರಾತ್ರಿ ನಡೆದಿದ್ದು, ಚಾಮರಾಜನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ 373 ಪಾಸಿಟಿವ್, 4 ಸಾವು – 29 ಜಿಲ್ಲೆಗಳಲ್ಲಿ ಶೂನ್ಯ ಮರಣ
ಈ ಪ್ರಕರಣದ ಹಿನ್ನೆಲೆ ಇಂದು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಲೋಕಪ್ಪ, ಆರೋಪಿಗೆ ಜೀವಾವಧಿ ಶಿಕ್ಷೆ 2 ಲಕ್ಷ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಉಷಾ ವಾದ ಮಂಡಿಸಿದ್ದರು. ಇದನ್ನೂ ಓದಿ: ಟೊಮೆಟೊ ಕದ್ದ ಖಾಕಿ ಸಮವಸ್ತ್ರಧಾರಿ – ವೀಡಿಯೋ ವೈರಲ್