ಚಿಕ್ಕಬಳ್ಳಾಪುರ: ತನ್ನ ಕೈಯಿಂದಲೇ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಪತ್ನಿಯನ್ನು ಕಂಡು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಕೊಮ್ಮಸಂದ್ರ ಗ್ರಾಮದ ನಿವಾಸಿಗಳಾದ ದೇವರಾಜ್ (28) ಮತ್ತು ಶ್ಯಾಮಲಾ (22) ಸಾವನ್ನಪ್ಪಿದ ದಂಪತಿ. ಸೋಮವಾರ ದೇವರಾಜ್ ಹಾಗೂ ಶ್ಯಾಮಲ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದಿದ್ದು, ಇದರಿಂದ ಕುಪಿತನಾದ ದೇವರಾಜ್ ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿಯ ಸಾವನ್ನು ಕಂಡ ಪತಿ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ದಂಪತಿ ಕಳೆದ 10 ತಿಂಗಳ ಹಿಂದೆಷ್ಟೆ ಮದುವೆಯಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv