ರಸ್ತೆಯಲ್ಲೆಲ್ಲಾ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆಗೈದ ಪಾಪಿ ಪತಿ!

Public TV
2 Min Read
HASSAN ASSAULT 2

ಹಾಸನ: ಗಂಡ-ಹೆಂಡತಿ (Husband- Wife Fight Hassan) ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತೇ ಇದೆ. ಆದರೆ ಇಲ್ಲೊಂದು ದಂಪತಿಯ ಕಲಹ ಬೀದಿಗೆ ಬಂದಿದೆ. ಈ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ.

HASSAN ASSAULT 3

ಹೌದು. ಪತಿ ಶ್ರೀನಿವಾಸ್ ತನ್ನ ಪತ್ನಿ ಸವಿತಾಳನ್ನು ಸಾರ್ವಜನಿಕರ ಮುಂದೆಯೇ ರಸ್ತೆ ತುಂಬಾ ಅಟ್ಟಾಡಿಸಿ ಮನಬಂದಂತೆ ರಾಡ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಪತ್ನಿ ಮೇಲೆ ಪತಿ ಅಮಾನುಷವಾಗಿ ಹಲ್ಲೆ ಮಾಡುವ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಮತ್ತೆ ಹೊಂದಾಣಿಕೆ ರಾಜಕೀಯ ಬಾಂಬ್- ಬಿಜೆಪಿ ಸಮಾವೇಶಗಳಲ್ಲೇ ಗದ್ದಲ, ಆಕ್ರೋಶ ಸ್ಫೋಟ

ಹಲ್ಲೆಗೈದಿದ್ದು ಯಾಕೆ..?: 18 ವರ್ಷಗಳ ಹಿಂದೆ ವಿವಾಹವಾಗಿದ್ದ ಶ್ರೀನಿವಾಸ್ ಹಾಗೂ ಸವಿತಾ ಕಳೆದ ಎರಡು ವರ್ಷಗಳಿಂದ ಒಂದೇ ಮನೆಯಲ್ಲಿ ವಿಭಾಗ ಮಾಡಿಕೊಂಡು ವಾಸ ಮಾಡುತ್ತಿದ್ದರು. ಪತಿಯಿಂದ ವಿಚ್ಛೇದನಕ್ಕಾಗಿ ಕಾನೂನು ಹೋರಾಟ ನಡೆಸುತ್ತಿರುವ ಸವಿತಾ ಆಸ್ತಿ ವಿಭಾಗಕ್ಕೂ ಪತಿ ಮೇಲೆ ಕೇಸ್ ಹಾಕಿದ್ದಳು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ- ಇಬ್ಬರ ದಾರುಣ ಸಾವು

HASSAN ASSAULT 1

ಶನಿವಾರ ಸಂಜೆ ಸೈಟ್ ಸೇಲ್ ಸಂಬಂಧ ಸವಿತಾ ಜೊತೆ ಶ್ರೀನಿವಾಸ್ ಜಗಳ ಮಾಡಿದ್ದಾನೆ. ಈ ವೇಳೆ ಎದುರು ಮಾತನಾಡಿದ ಪತ್ನಿ ಮೇಲೆ ಮಚ್ಚು ಹಾಗೂ ರಾಡ್‍ನಿಂದ ಹಲ್ಲೆ ಮಾಡಿದ್ದಾನೆ. ಪತಿಯ ಹಲ್ಲೆಯಿಂದ ತಪ್ಪಿಸಿಕೊಂಡು ಓಡಿದರೂ ಬಿಡದೆ ಮಚ್ಚಿನಿಂದ ಅಮಾನುಷವಾಗಿ ಹಲ್ಲೆಗೈದಿದ್ದಾನೆ. ಅಲ್ಲದೆ ಪತ್ನಿ ಸವಿತಾ ತಂಗಿ ಅನಿತಾ ಕಾರಿನ ಮೇಲೂ ದಾಳಿ ಮಾಡಿ ಗ್ಲಾಸ್ ಅನ್ನ ಪುಡಿ ಪುಡಿ ಮಾಡಿದ್ದಾನೆ.

ಸದ್ಯ ಗಾಯಾಳು ಸವಿತಾಗೆ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಇತ್ತ ಆರೋಪಿಗೆ ಮಚ್ಚು ನೀಡಿದ ಶ್ರೀನಿವಾಸ್ ಸಂಬಂಧಿಯನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿ ಶ್ರೀನಿವಾಸ್ ಬಂಧನಕ್ಕೆ ಎಸ್‍ಪಿ ಹರಿರಾಂ ಶಂಕರ್ ಎರಡು ತಂಡ ರಚಿಸಿದ್ದಾರೆ. ಘಟನೆ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

HASSAN ASSAULT

ಪತ್ನಿಯನ್ನು ಅಟ್ಟಾಡಿಸಿ ಪತಿ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಹರಿರಾಂ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಆರೋಪಿ ಶ್ರೀನಿವಾಸ್ ತನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ದಾನೆ. ಕೈ ಹಾಗೂ ಹಲವು ಭಾಗಗಳಿಗೆ ಗಾಯಗಳಾಗಿವೆ. ಗಾಯಾಳು ಔಟ್ ಆಫ್ ಡೇಂಜರ್ ಸ್ಥಿತಿಯಲ್ಲಿದ್ದಾರೆ. ಶೀಘ್ರ ಆರೋಪಿಯನ್ನು ಬಂಧಿಸುತ್ತೇವೆ. ಈಗಾಗಲೇ ಶ್ರೀನಿವಾಸ್‍ಗೆ ಮಚ್ಚು ನೀಡಿದ ಆತನ ಅಣ್ಣನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article