ಮಂಡ್ಯ: ಪತ್ನಿಯ ಶೀಲ ಶಂಕಿಸಿ ಪತಿಯೇ (Husband) ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಆಲಗೂಡು (Alagudu) ಗ್ರಾಮದಲ್ಲಿ ಜರುಗಿದೆ.
ರಶ್ಮಿ ಕೊಲೆಯಾದ ದುರ್ದೈವಿ ಮಹಿಳೆ. ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪತಿ ರಮೇಶ್ ಈ ಕೃತ್ಯ ಎಸಗಿದ್ದಾನೆ. ಆಲಗೂಡು ಗ್ರಾಮದ ನಿವಾಸಿಯಾದ ರಮೇಶ್, ಕಳೆದ ಕೆಲವು ಸಮಯದಿಂದ ಪತ್ನಿ ರಶ್ಮಿ ಅವರ ನಡತೆಯ ಮೇಲೆ ಸಂಶಯ ಪಡುತ್ತಿದ್ದ ಎನ್ನಲಾಗಿದೆ. ಇದೇ ವಿಷಯವಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಇದನ್ನೂ ಓದಿ: ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್
ಘಟನೆ ನಡೆದ ನಿನ್ನೆ ರಾತ್ರಿ ಜಗಳ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ರಮೇಶ್ ಕಬ್ಬಿಣದ ರಾಡಿನಿಂದ ರಶ್ಮಿ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ರಶ್ಮಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಭಾರತ-ಜಪಾನ್ ಡೀಲ್; 120 ಒಪ್ಪಂದ, 10 ಶತಕೋಟಿ ಡಾಲರ್ ಹೂಡಿಕೆ ನಿರೀಕ್ಷೆ – AI, ರಕ್ಷಣಾ ವಲಯಕ್ಕೆ ಬೂಸ್ಟ್
ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಬಳಿಕ ಆರೋಪಿ ರಮೇಶ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಪ್ರಸ್ತುತ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಅಂಕೋಲಾ-ಅವರ್ಸಾ ಬಳಿ ಖಾಸಗಿ ಬಸ್ ಪಲ್ಟಿ – ತಪ್ಪಿದ ದುರಂತ
ಈ ಕೊಲೆಗೆ ಸಂಬಂಧಿಸಿದಂತೆ ಮಂಡ್ಯದ ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ರಮೇಶನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇಬ್ಬರಲ್ಲಿ ಕೋಟೆಯಿಂದ ತಳ್ಳಿದವರ‍್ಯಾರು? – ಸುಳ್ಳು ಪತ್ತೆ ಪರೀಕ್ಷೆಗೆ ಒಪ್ಪಿದ ಸಿಯಾ
