ಕೋಲಾರ: ಪ್ರೀತಿಸಿ ಮದುವೆಯಾಗಿದ್ದ (Love Marriage) ಪತಿಯೇ ಪತ್ನಿಯ ಕುತ್ತಿಗೆ ಕೊಯ್ದು ಕೊಲೆಗೈದಿರುವ ಆಘಾತಕಾರಿ ಘಟನೆ ಮಾಲೂರು (Maluru) ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ಯೋಗಿನಿ (21) ಕೊಲೆಯದ ದುರ್ದೈವಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಆವಲಹಳ್ಳಿ ಮೂಲದ ಗಣೇಶ್ ಎಂಬಾತನಿಂದ ಕೊಲೆಯಾಗಿದೆ. ಇದನ್ನೂ ಓದಿ: ಚಾ.ನಗರ| ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ

ಈ ದಂಪತಿ 2 ವರ್ಷಗಳ ಹಿಂದೆ ಪ್ರೀತಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಯೋಗಿನಿ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚಿಗೆ ಹೆಂಡತಿ ಮೇಲೆ ಅನುಮಾನಪಟ್ಟು ಗಣೇಶ್ ಗಲಾಟೆ ಮಾಡಿಕೊಂಡಿದ್ದ. ಈ ಹಿನ್ನೆಲೆ ಚಾಕುವಿನಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: KRS ಖಾಲಿ ಖಾಲಿ – ಇನ್ನಿರೋದು ಕೇವಲ 11 ಟಿಎಂಸಿ ನೀರು
ಘಟನೆಯ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
