ರಾಮನಗರ: ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ (Kaggalipura) ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ.
ಸಿಂಚನ(21) ಕೊಲೆಯಾದ ಮಹಿಳೆ, ಪತಿ ರೇಣುಕಯ್ಯ ಎಂಬಾತನೇ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಪತ್ನಿಯ ಶೀಲ ಶಂಕಿಸಿ ಆಗಾಗೆ ರೇಣುಕಯ್ಯ ಗಲಾಟೆ ಮಾಡ್ತಿದ್ದ. ಅದರಂತೆ ಶುಕ್ರವಾರವೂ ಕೂಡ (ಫೆ.20) ಕೂಡ ಗಲಾಟೆ ನಡೆಸಿ ಮನೆಮುಂದೆಯೇ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಆರೋಪಿ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.ಇದನ್ನೂ ಓದಿ: ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ

