ಕಾರವಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ (Murder) ಘಟನೆ ಮುರುಡೇಶ್ವರದಲ್ಲಿ (Murdeshwar) ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ನಂದಿನಿ ನಾಯ್ಕ (30) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಲೋಕೇಶ್ ನಾಯ್ಕ (34) ಕೊಲೆ ಆರೋಪಿಯಾಗಿದ್ದಾನೆ. ಇಬ್ಬರ ನಡುವೆ ಗಲಾಟೆ ನಡೆದಿದೆ ಇದೇ ಕಾರಣಕ್ಕೆ ಆರೋಪಿ ಏಕಾಏಕಿ ಚಾಕುವಿನಿಂದ ಕತ್ತಿನ ಬಳಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಹೊರಗೆ ಓಡಿ ಬಂದಿದ್ದು, ಜನ ಸೇರುವಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಗ್ಯಾರಂಟಿ ಸ್ಕೀಂ ಸರ್ಕಾರದಲ್ಲಿ ಅರಮನೆ ವೀಕ್ಷಣೆ ದುಬಾರಿ – ಟಿಕೆಟ್ ದರ ಭಾರೀ ಏರಿಕೆ
ಕೊಲೆ ಮಾಡಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆತನನ್ನು ಹೋಟೆಲ್ ಒಂದರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಲ್ಪಿ ಕೆಲಸ ಮಾಡುತ್ತಿದ್ದ ಲೋಕೆಶ್ ನಾಯ್ಕ ಕಳೆದ ಮೂರು ದಿನಗಳಿಂದ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಈ ಸಂಬಂಧ ಮುರುಡೇಶ್ವರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಮಳೆ ಮುನ್ಸೂಚನೆ – ಎಲ್ಲೆಲ್ಲಿ ಜಾಸ್ತಿ ಮಳೆಯಾಗಲಿದೆ?
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]