– ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಬೆಂಗಳೂರು: ನಡುರಸ್ತೆಯಲ್ಲೇ ಪತ್ನಿಯನ್ನು ಬರ್ಬರ ಹತ್ಯೆಗೈದು ಪತಿ ಪರಾರಿಯಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ (Electronic City) ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದಲ್ಲಿ ನಡೆದಿದೆ.
ಬಾಗೇಪಲ್ಲಿ (Bagepalli) ಮೂಲದ ಶಾರದ (35) ಮೃತ ಪತ್ನಿ. ಕೃಷ್ಣ ಪತ್ನಿಯನ್ನು ಕೊಂದ ಪಾಪಿ ಪತಿ. ಅಕ್ರಮ ಸಂಬಂಧ ಹಿನ್ನೆಲೆ ಕೊಲೆ ಶಂಕೆ ವ್ಯಕ್ತವಾಗಿದೆ. ನಡು ರಸ್ತೆಯಲ್ಲಿ ಪತ್ನಿಗೆ ಚಾಕುವಿನಿಂದ ಕುತ್ತಿಗೆ ಕುಯ್ದು ಪತಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗ್ನೇಯ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಸೋಕೋ ಟೀಂ ಆಗಮಿಸಿದೆ. ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಯಾವುದೇ ಮಸೀದಿ, ಕಬ್ರಸ್ತಾನ್ ಮುಟ್ಟಲ್ಲ: ವಕ್ಫ್ ಮಸೂದೆ ಬಗ್ಗೆ ಬಿಜೆಪಿ ಸಂಸದ ಪ್ರತಿಕ್ರಿಯೆ
ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಪತ್ನಿ ಕೆಲಸ ಮುಗಿಸಿ ನಿರ್ಜನ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪತಿ ದಾಳಿ ನಡೆಸಿದ್ದಾನೆ. ಆರೋಪಿ ಪತ್ನಿಯನ್ನು ಕೊಲ್ಲಲು ಎರಡು ಚಾಕು ತಂದಿದ್ದ. ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗುತ್ತಿದ್ದ ಆರೋಪಿ ಪತಿಯನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಕೇಸ್ – ಶಾಸಕ ಪೊನ್ನಣ್ಣ & ವಿನಯ್ ಸೋಮಯ್ಯ ವಾಟ್ಸಪ್ ಚಾಟ್‌ನಲ್ಲೇನಿದೆ?
ಘಟನೆ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಸಾರ ಫಾತಿಮಾ ಮಾಧ್ಯಮದವರೊಂದಿಗೆ ಮಾತನಾಡಿ, ಸುಮಾರು 8 ಗಂಟೆಯ ಸಮಯದಲ್ಲಿ ನಮ್ಮ ಕಂಟ್ರೋಲ್ ರೂಮಿಗೆ ಮಾಹಿತಿ ಬಂತು. ನಮ್ಮ ಎಲೆಕ್ಟ್ರಾನಿಕ್ ಸಿಟಿ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದಾರೆ. ಶಾರದಾ ಎಂಬ ಮಹಿಳೆಯ ಕೊಲೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ನಮ್ಮ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯಾವ ವಿಚಾರಕ್ಕೆ ಕೊಲೆಯಾಗಿದೆ ಎಂದು ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ಬಂದ ನಂತರ ಸಂಪೂರ್ಣ ವಿಚಾರ ಗೊತ್ತಾಗಬೇಕಾಗಿದೆ. ಇದನ್ನೂ ಓದಿ: Bengaluru | ಅನಾರೋಗ್ಯಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ