ಬೆಂಗಳೂರು/ಆನೇಕಲ್: ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು, ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ಸುರೇಶ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಈತ ಮೈಲ ಸಂದ್ರ ಗ್ರಾಮದ ನಿವಾಸಿಯಾಗಿದ್ದನು. ಘಟನೆ ನಡೆದು ಎರಡು ದಿನಗಳಾಗಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿ ನಿತ್ಯ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸುರೇಶ್ ಮಂಗಳವಾರ ಮತ್ತೆ ಹೆಂಡತಿಯೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಹೆಂಡತಿಗೆ ಚಾಕುವಿನಿಂದ ಇರಿದಿದ್ದಾನೆ. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣಕ್ಕೆ ತಿರುವು – ಉಗ್ರ ಸಂಘಟನೆಯೊಂದರ ಕೈವಾಡ: ಎನ್ಐಎ
Advertisement
Advertisement
ಬಳಿಕ ಸ್ಥಳೀಯರು ಆಗಮಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದರ ಬೆನ್ನಲ್ಲೆ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಶಾಲಾ, ಕಾಲೇಜುಗಳಿಗೆ ರಜೆ