ಹೈದರಾಬಾದ್: ಮದುವೆಯಾದ ಆರು ತಿಂಗಳಲ್ಲೇ ಹೆಂಡತಿ ಮೇಲೆ ಅನುಮಾನಪಟ್ಟು, ಅವಳನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್‍ನ ಮೂಸಾಪೇಟೆಯಲ್ಲಿ ನಡೆದಿದೆ.
Advertisement
ಪುಣ್ಯವತಿ(20) ಮೃತಳು, ಸಂತೋಷ್ ಕೊಲೆ ಮಾಡಿದ ಪತಿಯಾಗಿದ್ದಾನೆ. ಮದುವೆಯಾಗಿ ಆರು ತಿಂಗಳಲ್ಲೇ ಕಟ್ಟಿಕೊಂಡ ಹೆಂಡತಿ ಮೇಲೆ ಅನುಮಾನಪಟ್ಟು, ಅವಳನ್ನು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಪತ್ನಿಯ ಶಿರಚ್ಛೇದ ಮಾಡಿ ಪೊಲೀಸ್ ಠಾಣೆಗೆ ಹೊತ್ತೊಯ್ದ
Advertisement
Advertisement
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯವನಾದ ಸಂತೋಷ್, ಬಾಲ್ಯದಿಂದಲೂ ಪೋಷಕರೊಂದಿಗೆ ಹೈದರಾಬಾದ್‍ನ ಮುಸಾಪೇಟೆಯಲ್ಲಿ ವಾಸವಾಗಿದ್ದನು. ವೆಲ್ಡಿಂಗ್‍ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದನು. ಕಳೆದ ಮೇ ತಿಂಗಳಲ್ಲಿ ಸ್ಥಳೀಯ ನಿವಾಸಿ ಪುಣ್ಯವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ. ಇದರ ಬೆನ್ನಲ್ಲೇ ಹೆಂಡತಿ ಜೊತೆ ಬೇರೆ ಮನೆ ಮಾಡಿಕೊಂಡು ವಾಸ ಮಾಡಲು ಶುರು ಮಾಡಿದ್ದನು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತನ ಪತ್ನಿ, ಬಾಮೈದುನನಿಗೂ ಸೋಂಕು- ಗುಜರಾತ್‌ನಲ್ಲಿ 3ಕ್ಕೇರಿದ ಸಂಖ್ಯೆ
Advertisement
ಕೆಲ ತಿಂಗಳು ಕಳೆದ ಮೇಲೆ ಪುಣ್ಯವತಿ ಮೇಲೆ ಅನುಮಾನಪಡಲು ಶುರು ಮಾಡಿದ್ದ. ಕುಟುಂಬದ ಸದಸ್ಯರು ಸೇರಿದಂತೆ ಯಾರೊಂದಿಗೂ ಫೋನ್‍ನಲ್ಲಿ ಮಾತನಾಡದಂತೆ ತಿಳಿಸಿದ್ದನು. ಈ ವಿಚಾರವಾಗಿ ಮಾನಸಿಕವಾಗಿ ನೊಂದಿದ್ದ ಪುಣ್ಯವತಿ ತಮ್ಮ ಚಿಕ್ಕಪ್ಪ, ಚಿಕ್ಕಮ್ಮನ ಬಳಿ ಹೇಳಿಕೊಂಡಿದ್ದಳು. ಈ ವೇಳೆ, ಎರಡು ಕುಟುಂಬದವರು ಮಧ್ಯಪ್ರವೇಶ ಮಾಡಿ, ರಾಜಿ ಮಾಡಿಸಿ, ಸಂತೋಷ್‍ಗೆ ಬುದ್ಧಿವಾದ ಹೇಳಿದ್ದರು. ಇದಾದ ಬಳಿಕ ಕೆಲ ದಿನಗಳ ಕಾಲ ಚೆನ್ನಾಗಿದ್ದ ಆತ ಮತ್ತೆ ತನ್ನ ಹಳೇ ಚಾಳಿ ಮುಂದುವರೆಸಿದ್ದ. ಜೊತೆಗೆ ಮದ್ಯಪಾನ ಮಾಡಲು ಶುರು ಮಾಡಿ, ಪತ್ನಿ ಜೊತೆ ಜಗಳ ಮಾಡಲು ಆರಂಭಿಸಿದ್ದ.
ಕಿರುಕುಳ ನೀಡಲು ಶುರು ಮಾಡಿರುವ ಸಂತೋಷ್ ನಿನ್ನೆ ಹೆಂಡತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ತುಂಬಾ ಸಮಯವಾದರೂ ಮನೆಯ ಬೀಗ ಹಾಕಿದ್ದ ಕಾರಣ ಸ್ಥಳೀಯರು ಎರಡು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ಬಂದು ನೋಡಿದಾಗ ಪುಣ್ಯವತಿ ಕೊಲೆಯಾಗಿದ್ದಳು. ಘಟನಾ ಸ್ಥಳಕ್ಕೆ ಕುಕ್ಕಟ್‍ಪಲ್ಲಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಆರೋಪಿ ಸಂತೋಷ್ ಸ್ಥಳದಿಂದ ಪರಾರಿಯಾಗಿದ್ದಾನೆ.