BelgaumCrimeDistrictsKarnatakaLatestMain Post

ಪತ್ನಿಯನ್ನು ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ನೆರೆಮನೆಯವನಿಂದ ಪತಿ ಹತ್ಯೆ

ಬೆಳಗಾವಿ: ಹೆಂಡತಿಯನ್ನು (Wife) ಚುಡಾಯಿಸುತ್ತಿದ್ದ ನೆರೆಮನೆಯವನನ್ನು (Neighbor) ಪತಿ (Husband) ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಕೋಪಗೊಂಡ ನೆರೆಮನೆಯಾತ ಪತಿಯನ್ನು ಕಟ್ಟಿಗೆಯಿಂದ ಹೊಡೆದು, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಖಾನಾಪೂರದಲ್ಲಿ ನಡೆದಿದೆ.

ಖಾನಾಪುರ ಪಟ್ಟಣದ ಬಾಹೇರ್‌ಗಲ್ಲಿಯ ನಿವಾಸಿ ಮಾರುತಿ ಜಾಧವ್(40) ಕೊಲೆಯಾದ ವ್ಯಕ್ತಿ. ಪಕ್ಕದ ಮನೆಯ ಪ್ರಶಾಂತ್ ನಾರ್ವೇಕರ್(35) ಹತ್ಯೆ ಮಾಡಿದ ಆರೋಪಿ. ಇದನ್ನೂ ಓದಿ: ಮನೆಯನ್ನು ಒಂದಿಂಚು ಜಾಸ್ತಿ ಒಡೆದ್ರೂ ಕಲ್ಲೇಟು- ಅಧಿಕಾರಿಗಳಿಗೆ ಮನೆ ಮಾಲೀಕ ಅವಾಜ್

ಕಳೆದ ಕೆಲ ದಿನಗಳಿಂದ ಮಾರುತಿಯ ಪತ್ನಿಯನ್ನು ಪ್ರಶಾಂತ್ ಚುಡಾಯಿಸುತ್ತಿದ್ದ. ಈ ಬಗ್ಗೆ ಮಾರುತಿ ಪ್ರಶಾಂತ್‌ನನ್ನು ಪ್ರಶ್ನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಪ್ರಶಾಂತ್ ಭಾನುವಾರ ರಾತ್ರಿ ಮಾರುತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾನೆ. ಘಟನೆ ಬಗ್ಗೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯರಿಗೆ ಎರಡು ಬೆರಳಿನ ಪರೀಕ್ಷೆ – ಸುಪ್ರೀಂಕೋರ್ಟ್ ಅಸಮಾಧಾನ

Live Tv

Leave a Reply

Your email address will not be published. Required fields are marked *

Back to top button