ಮಂಡ್ಯ: ಸಿಟ್ಟಿನಲ್ಲಿ ಪತಿಯೊಬ್ಬ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೂಳ ಗ್ರಾಮದಲ್ಲಿ ನಡೆದಿದೆ.
ಪ್ರಿಯಾಂಕ(21) ಮೃತ ದುರ್ದೈವಿ. ಪತಿ ಕಿರಣ್ ತನ್ನ ಪತ್ನಿ ಪ್ರಿಯಾಂಕ ಮೇಲೆ ಹಲ್ಲೆ ನಡೆಸಿದ್ದು, ಈಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಮೈಸೂರು ಮೂಲದ ಕಿರಣ್ ಮತ್ತು ಪ್ರಿಯಾಂಕ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಪ್ರೀತಿಸಿ ಮದುವೆಯಾದ ನಂತರ ಬೆಳಗೂಳ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಗುರುವಾರ ರಾತ್ರಿ ಪತಿ ಹಾಗೂ ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು.
ಸಿಟ್ಟಾಗಿದ್ದ ಕಿರಣ್ ಪ್ರಿಯಾಂಕ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಪತ್ನಿ ಸಾವನ್ನಪ್ಪಿ ಕಿರಣ್ ಪೊಲೀಸ್ ಠಾಣೆ ಪಾಲಾಗಿದ್ದಾನೆ. ಸದ್ಯ ಈ ಬಗ್ಗೆ ಕೆಆರ್‍ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv