ಹಾವೇರಿ: ವ್ಯಕ್ತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದು, ನಂತರ ಅನುಮಾನ ಬಾರದಂತೆ ಆಕೆಯ ಸೀರೆಯಿಂದ ಕುತ್ತಿಗೆ ಬಿಗಿದಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಭದ್ರಾಪುರ ನಿವಾಸಿ ಗಾಯತ್ರಿ(27) ಪತಿಯಿಂದಲೇ ಹತ್ಯೆಯಾದ ಪತ್ನಿ. ಪತಿ ಸತೀಶ್ ಎಂಬಾತನಿಂದ ಹತ್ಯೆ ನಡೆದಿದೆ. ಆರೋಪಿ ಸತೀಶ್ ಭಾನುವಾರ ಬೈಕ್ ಮೇಲೆ ರಾಣೇಬೆನ್ನೂರು ತಾಲೂಕು ದೇವರಗುಡ್ಡದ ಮಾಲತೇಶ ದೇವಸ್ಥಾನಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಏಕಾಏಕಿ ಗಾಯತ್ರಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
Advertisement
ಮೂರು ವರ್ಷಗಳ ಹಿಂದೆ ಗಾಯಿತ್ರಿ ಮತ್ತು ಸತೀಶ್‍ಗೆ ಮದುವೆಯಾಗಿತ್ತು. ಆದರೆ ಇತ್ತೀಚೆಗೆ ಆರೋಪಿ ಸತೀಶ್ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದನು. ಈ ಕಾರಣದಿಂದ ಕೊಲೆ ಮಾಡಿರಬಹುದು ಎಂದು ತಿಳಿದು ಬಂದಿದೆ.
Advertisement
ಸದ್ಯಕ್ಕೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಸತೀಶ್‍ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ. ಈ ಘಟನೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.