ಪತಿಯಿಂದಲೇ ಪತ್ನಿ ಹತ್ಯೆ- ಪೊಲೀಸರಿಗೆ ಶರಣಾದ ಆರೋಪಿ

Advertisements

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಲದಕುಪ್ಪೆ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದ ಘಟನೆ ನಡೆದಿದೆ.

Advertisements

ಮಹದೇವಪ್ಪ (55) ಬಂಧಿತ ಆರೋಪಿ ಹಾಗೂ ಮಹದೇವಮ್ಮ (45) ಮೃತ ಮಹಿಳೆ. ದಂಪತಿ ಕಿಲಗೆರೆ ಹಾಗೂ ಮಾದಲವಾಡಿ ಗ್ರಾಮದ ನಡುವೆ ಇರುವ ಬೇಲದಕುಪ್ಪೆಯ ಜಮೀನೊಂದರಲ್ಲಿ ವಾಸವಾಗಿದ್ದರು. ಇವರ ನಡುವೆ ಇಂದು ಮುಂಜಾನೆ ಏಕಾಏಕಿ ಜಗಳ ನಡೆದಿದೆ. ಇದನ್ನೂ ಓದಿ: ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿಗೆ ಆಧಾರ್ ಕಾರ್ಡ್ ಸಮಸ್ಯೆ!

Advertisements

ಜಗಳ ವಿಕೋಪಕ್ಕೆ ತಿರುಗಿ ಸ್ನಾನದ ಮನೆಯಲ್ಲಿದ್ದ ಪತ್ನಿ ಮಹದೇವಮ್ಮರನ್ನು ಪತಿ ಮಹದೇವಪ್ಪ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಪತಿ ಮಹದೇವಪ್ಪ ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವ ಘಟನೆ ನಡೆದಿದೆ. ಘಟನೆ ಸಂಬಂಧಿಸಿ ತೆರಕಣಾಂಬಿ ಪೊಲೀಸ್ ಠಾಣೆಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಮನಗರದಲ್ಲಿ ಮೌಢ್ಯತೆ ಇನ್ನೂ ಜೀವಂತ- ಹಸಿ ಬಾಣಂತಿ, ಮಗು ಗ್ರಾಮದಿಂದ ಹೊರಕ್ಕೆ

Advertisements
Exit mobile version