ಶಿವಮೊಗ್ಗ: ವ್ಯಕ್ತಿಯೊಬ್ಬ ತನ್ನ ಪತ್ನಿಯ (Wife) ಕತ್ತಿಗೆ ಟವೆಲ್ ಬಿಗಿದು ಹತ್ಯೆಗೈದ ಘಟನೆ ಶಿಕಾರಿಪುರ (Shikaripura) ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಗೌರಮ್ಮ (28) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಮಹಿಳೆಯ ಪತಿ ಮನೋಜ್ ಎಂದು ಗುರುತಿಸಲಾಗಿದೆ. ಆರೋಪಿ ಶನಿವಾರ ಮಧ್ಯಾಹ್ನ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿ ಜೊತೆ ಜಗಳವಾಡಿದ್ದ. ಅಲ್ಲದೇ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ಟವೆಲ್‍ನಿಂದ ಪತ್ನಿ ಗೌರಮ್ಮಳ ಕತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಮನೋಜ್‍ನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.