ಚಿತ್ರದುರ್ಗ: ಪತಿಯೊಬ್ಬ ಹೆಂಡತಿಯನ್ನು ಕೊಂದು ಮನೆಯಲ್ಲೇ ಹೂತು ಹಾಕಿದ್ದ ಘಟನೆ ಚಿತ್ರದುರ್ಗ ತಾಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ.
ಸುಮಾ (30) ಹತ್ಯೆಗೊಳಗಾದ ಮಹಿಳೆ. ನಾರಪ್ಪ ಎಂಬಾತ ಕೌಟುಂಬಿಕ ಕಲಹ ಹಿನ್ನೆಲೆ ತನ್ನ ಪತ್ನಿಯನ್ನೇ ಹತ್ಯೆಗೈದಿದ್ದಾನೆ.
ಡಿಸೆಂಬರ್ 26 ರಂದು ನಡೆದಿರುವ ಹತ್ಯೆ ಪ್ರಕರಣ ಇದಾಗಿದ್ದು, ಹತ್ಯೆ ಬಳಿಕ ಶವವನ್ನು ಮನೆಯ ಹಾಲ್‍ನಲ್ಲಿ ಹೂತು ಹಾಕಿದ್ದಾನೆ. ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಭಾರೀ ಭದ್ರತಾ ಲೋಪ – ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ
ಹೂತಿಟ್ಟ ಶವವನ್ನು ಹೊರ ತೆಗೆಯುವ ಕಾರ್ಯ ಆರಂಭವಾಗಿದ್ದು, ಎಎಸ್‍ಪಿ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಪಾಡುರಂಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್‌ಗೆ ಆಕಸ್ಮಿಕ ಬೆಂಕಿ
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.