– ಘಟನೆಯ ಬಳಿಕ ಗಂಡ ಎಸ್ಕೇಪ್
ಭೋಪಾಲ್: ಮನೆಯಿಂದ ಆಚೆ ಹೋಗುವ ಸಂದರ್ಭ ಹೆಂಡತಿ ಸುಗಂಧ ದ್ರವ್ಯ (Perfume) ಹಾಕಿದ್ದಕ್ಕಾಗಿ ಪತಿ ಆಕೆಯ ಮೇಲೆ ಗುಂಡು (Shoot) ಹಾರಿಸಿದ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಗುಂಡು ಹಾರಿಸಿದ ಬಳಿಕ ಆಕೆಯ ಪತಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಬಿಜೋಯಿಲಿ (Bijoili) ಠಾಣಾ ವ್ಯಾಪ್ತಿಯ ಗಣೇಶಪುರ ನಿವಾಸಿ ನೀಲಂ ಜಾತವ್ ಎಂಬಾಕೆ 8 ವರ್ಷಗಳ ಹಿಂದೆ ಮಹೇಂದ್ರ ಜಾತವ್ ಎಂಬಾತನನ್ನು ವಿವಾಹವಾಗಿದ್ದಳು. ಮಹೇಂದ್ರ ಜಾತವ್ ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯಾಗಿದ್ದು, ಕಳ್ಳತನ ಪ್ರಕರಣದಲ್ಲಿ ಜೈಲುಪಾಲಾಗಿದ್ದ. ಇದನ್ನೂ ಓದಿ: ಮುತ್ತು ಕೊಡುವ ವೇಳೆ ನೆನಪಾದ ಸೇಡು – ಗಂಡನ ನಾಲಿಗೆಗೆ ಹಲ್ಲಿನಲ್ಲೇ ಕತ್ತರಿ
ಗಂಡ ಜೈಲು ಸೇರಿದ ಬಳಿಕ ನೀಲಂ ತನ್ನ ತಂದೆಯ ಮನೆಯಲ್ಲಿ ವಾಸಿಸುತ್ತಿದ್ದಳು. ಮಹೇಂದ್ರ ಜಾತವ್ ನಾಲ್ಕು ವರ್ಷಗಳ ಜೈಲುವಾಸ ಮುಗಿಸಿ ಒಂದು ವರ್ಷದ ಹಿಂದಷ್ಟೇ ಜೈಲಿನಿಂದ ಹೊರಬಂದು ತನ್ನ ಹೆಂಡತಿಯೊಂದಿಗೆ ಆಕೆಯ ತಂದೆಯ ಮನೆಯಲ್ಲಿ ವಾಸಿಸುತ್ತಿದ್ದ. ಇದನ್ನೂ ಓದಿ: ಬೆಂಗ್ಳೂರಲ್ಲಿ ಕದ್ರು, ಚೆನ್ನೈನಲ್ಲಿ ಮಾರಿದ್ರು- ಕೊನೆಗೂ ಸಿಕ್ಕಿಬಿದ್ದ ಟೊಮೆಟೋ ಕಳ್ಳರು
ಶನಿವಾರ ನೀಲಂ ಮನೆಯಿಂದ ಹೊರಗಡೆ ಹೋಗುವ ಸಂದರ್ಭ ಸುಗಂಧ ದ್ರವ್ಯವನ್ನು ಹಾಕಿದ್ದು, ಇದರ ಬಗ್ಗೆ ಪತಿ ಮಹೇಂದ್ರ ಆಕೆಯನ್ನು ಪ್ರಶ್ನಿಸಿದ್ದಾನೆ. ಇದರಿಂದಾಗಿ ದಂಪತಿ ನಡುವೆ ವಾಗ್ವಾದ ಶುರುವಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಕೋಪದ ಭರದಲ್ಲಿ ಪತಿ ಗನ್ (Gun) ತೆಗೆದು ಪತ್ನಿಯ ಎದೆಗೆ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ದೇಗುಲ ಧ್ವಂಸ- ಆರೋಪಿಯ ಬಂಧನ
ಎದೆಗೆ ಗುಂಡು ತಗುಲಿದ ಬಳಿಕ ಆಕೆ ಅಲ್ಲಿಯೇ ಕುಸಿದು ಬಿದ್ದಿದ್ದಾಳೆ. ಘಟನೆ ನಡೆದ ತಕ್ಷಣ ನೀಲಂ ಅವರ ಸಹೋದರ ದಿನೇಶ್ ಜಾತವ್ ತನ್ನ ಸಂಬಂಧಿಕರಿಗೆ ಕರೆ ಮಾಡಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ನೀಲಂ ಕುಟುಂಬಸ್ಥರು ದೂರು ನೀಡಿದ್ದು, ಮಹೇಂದ್ರನ ವಿರುದ್ಧ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಆತನ ಪತ್ತೆಗಾಗಿ ಬಲೆಬೀಸಿದ್ದಾರೆ. ಇದನ್ನೂ ಓದಿ: ತಂಗಿಯ ಶಿರಚ್ಛೇದ ಮಾಡಿ ರುಂಡ ಹಿಡಿದು ಹೋಗ್ತಿದ್ದ ಅಣ್ಣನ ಬಂಧನ
Web Stories