ಪತ್ನಿಯ ಜೊತೆ ಅಕ್ರಮ ಸಂಬಂಧ – ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ

Public TV
2 Min Read
murder 3

ಚಿಕ್ಕಬಳ್ಳಾಪುರ: ತನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ (Illicit Relationship) ಹಿನ್ನೆಲೆ ಪ್ರಿಯಕರನ ಕತ್ತು ಸೀಳಿ ಆಕೆಯ ಪತಿ ರಕ್ತ ಕುಡಿದಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ.

ಚಿಂತಾಮಣಿ ತಾಲೂಕಿನ ಬಟ್ಲಪಲ್ಲಿ ನಿವಾಸಿ ವಿಜಯ್ ತನ್ನ ಪತ್ನಿಯ ಪ್ರಿಯಕರನಾದ ಬಾಗೇಪಲ್ಲಿ ತಾಲೂಕು ಮಂಡಂಪಲ್ಲಿ ನಿವಾಸಿ ಮಾರೇಶ್ ಎಂಬಾತನ ಕತ್ತು ಸೀಳಿ ರಕ್ತ ಹೀರಿದ್ದಾನೆ. ಅಸಲಿಗೆ ವಿಜಯ್ ಹಾಗೂ ಮಾರೇಶ್ ಇಬ್ಬರು ಚಿಂತಾಮಣಿ ನಗರದಲ್ಲಿ ವಾಸವಾಗಿದ್ದು, ಇಬ್ಬರೂ ಸಹ ಟಾಟಾ ಏಸ್ (Tata Ace) ವಾಹನದಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದರು. ಆದರೆ ತನ್ನ ಹೆಂಡತಿ ಮಾಲಾ ಜೊತೆ ಮಾರೇಶ್ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡ ವಿಜಯ್, ಮಾರೇಶ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ಟಾಟಾ ಏಸ್ ಗಾಡಿ ತೆಗೆದುಕೊಂಡು ಬಾ ಬಾಡಿಗೆ ಇದೆ, ಹೋಗಿ ಬರೋಣ ಎಂದು ಕರೆದುಕೊಂಡು ಹೋಗಿ ಸಿದ್ದೇಪಲ್ಲಿ ಕ್ರಾಸ್ ಬಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ನಡೆಸಿದ್ದಾನೆ. ಇದನ್ನೂ ಓದಿ: ಮಗಳಿಗೆ ವಿಚ್ಛೇದನ ಕೊಡಲು ಪ್ರೋತ್ಸಾಹಿಸಿದ ಅತ್ತೆಯನ್ನೇ ಹತ್ಯೆಗೈದ ಅಳಿಯ

ವಿಜಯ್ ಚಾಕುವಿನಿಂದ ಮಾರೇಶ್ ಕತ್ತು ಸೀಳಿದ್ದು, ರಕ್ತ ಹೊರಚಿಮ್ಮಿದಾಗ ಅದನ್ನು ಕುಡಿದು ತನ್ನ ಕೋಪ ಪ್ರತಾಪ ತೀರಿಸಿಕೊಂಡಿದ್ದಾನೆ. ಈ ಘಟನೆ ಜೂನ್ 19ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಜಯ್ ಜೊತೆ ಇದ್ದ ಸ್ನೇಹಿತ ಈ ಕತ್ತು ಸೀಳಿ ರಕ್ತ ಕುಡಿಯುವ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ. ಇದನ್ನೂ ಓದಿ: ಬೆಳೆಗೆರೆ ಲಕ್ಷ್ಮಿರಂಗನಾಥಸ್ವಾಮಿ ದೇಗುಲಕ್ಕೆ ಕನ್ನ – ಬೀಗ ಮುರಿದು ದೇವರ ಆಭರಣ ಕದ್ದ ಖದೀಮರು

ಘಟನೆ ನಡೆದ ದಿನ ವಿಷಯ ತಿಳಿದ ವಿಜಯ್ ಸಹೋದರ ಹಲ್ಲೆಗೊಳಗಾದ ಮಾರೇಶ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ರಾಜಿ ಪಂಚಾಯಿತಿ ಮಾಡಿಕೊಳ್ಳಲು ಮುಂದಾಗಿದ್ದರು. ಆದರೆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆದ ನಂತರ ಪೊಲೀಸರ ಗಮನಕ್ಕೂ ಬಂದಿದ್ದು, ವಿಚಾರಣೆ ನಡೆಸಿದಾಗ ಆರೋಪಿಗಳ ಗುರುತು ಪತ್ತೆಯಾಗಿದೆ. ತದನಂದರ ಮಾರೇಶ್ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನನ್ವಯ ವಿಜಯ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಮತ್ತೋರ್ವ ಆರೋಪಿಯಾದ ಜಾನ್ ಎಂಬಾತನನ್ನೂ ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈತ ಈ ದುಷ್ಕೃತ್ಯ ಮಾಡಲು ವಿಜಯ್‌ಗೆ ಸಹಕಾರ ನೀಡಿದ್ದಲ್ಲದೇ ಆತ ಕತ್ತು ಸೀಳಿ ರಕ್ತ ಕುಡಿಯುತ್ತಿರುವ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ. ಇದನ್ನೂ ಓದಿ: ಸ್ನೇಹಿತರ ಜೊತೆ ಪಾರ್ಟಿ ವೇಳೆ ಗಲಾಟೆ – ಬೆಂಗಳೂರಲ್ಲಿ ಯುವಕನ ಬರ್ಬರ ಹತ್ಯೆ

Share This Article