ಗಾಂಧಿನಗರ: ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‍ಗೆ ಕರೆದುಕೊಂಡು ಹೋಗಿದ್ದ ಗಂಡ 500 ರೂಪಾಯಿಗೆ ಪತ್ನಿಯನ್ನು ಮಾರಿದ ಘಟನೆ ಗುಜರಾತ್‍ನಲ್ಲಿ ನಡೆದಿದೆ.
ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‍ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ. ಆತನ ಹೆಂಡತಿಯನ್ನು ಖರೀದಿಸಿದ ವ್ಯಕ್ತಿ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಇದನ್ನೂ ಓದಿ: ವಿಶ್ವ ಹಿಂದೂ ಪರಿಷತ್‍ನವರು ದೇಶ ಭಕ್ತರಾ?: ರಾಮಲಿಂಗಾರೆಡ್ಡಿ
ಹೋಟೆಲ್‍ಗೆ ಬಂದಿದ್ದ ವ್ಯಕ್ತಿಯ ಜೊತೆಗಿದ್ದ ಆತನ ಹೆಂಡತಿಯನ್ನು ನೋಡಿದ ಸೋನು ಶರ್ಮ ಆಕೆಯನ್ನು ತನಗೆ ಕೊಡಬೇಕೆಂದು ಕೇಳಿದ್ದ. ಅದಕ್ಕೆ ಒಪ್ಪಿದ ಆತ ಸೋನು ಶರ್ಮನಿಂದ 500 ರೂ. ಪಡೆದು ತನ್ನ ಹೆಂಡತಿಯನ್ನು ಆತನಿಗೆ ಮಾರಾಟ ಮಾಡಿದ್ದ. ಈ ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: ಡ್ರಗ್ಸ್, ಸಿಗರೇಟ್, ಸೆಕ್ಸ್‌ಗೆ ಮಗನಿಗೆ ಓಕೆ ಅಂದಿದ್ದೇನೆ: ಶಾರೂಖ್ ವೀಡಿಯೋ ವೈರಲ್
ಅತ್ಯಾಚಾರ ನಡೆದ ಬಳಿಕ ಆ 21 ವರ್ಷದ ಮಹಿಳೆ ಪೊಲೀಸ್ ಠಾಣೆಗೆ ಬಂದು ತನ್ನ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಆ ದೂರಿನ ಆಧಾರದಲ್ಲಿ ಸೋನು ಶರ್ಮ ಹಾಗೂ ಆ ಮಹಿಳೆಯ ಗಂಡನನ್ನು ಬಂಧಿಸಲಾಗಿದೆ.