ರಾಮನಗರ: ಅನೈತಿಕ ಸಂಬಂಧ (Illicit Relationship) ಶಂಕೆ ಹಿನ್ನೆಲೆ ಪತ್ನಿಯನ್ನು (Wife) ಮಚ್ಚಿನಿಂದ ಕೊಚ್ಚಿ ಪತಿ (Husband) ಕೊಲೆ ಮಾಡಿರುವ ಘಟನೆ ರಾಮನಗರ (Ramanagara) ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗಮ್ಮ (45) ಕೊಲೆಯಾದ ಮಹಿಳೆ. ಅದೇ ಗ್ರಾಮದ ಕಿಟ್ಟಿ ಎಂಬಾತನ ಜೊತೆ ನಾಗಮ್ಮನಿಗೆ ಅನೈತಿಕ ಸಂಬಂಧವಿದೆ ಎಂದು ಪತಿ ಕಣಿಮಾದಯ್ಯ ಶಂಕಿಸಿದ್ದ. ಅದೇ ವಿಚಾರವಾಗಿ ಮನೆಯಲ್ಲಿ ಪದೇಪದೇ ಗಲಾಟೆ ನಡೆಯುತ್ತಿತ್ತು. ಇಂದು ಗಲಾಟೆ ವಿಕೋಪಕ್ಕೆ ತಿರುಗಿ ಕಣಿಮಾದಯ್ಯ ನಾಗಮ್ಮನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆ ಪರಿಣಾಮ ತೀವ್ರ ರಕ್ತಸ್ರಾವದಿಂದ ನಾಗಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: Himachal Pradesh | ಚಂಬಾ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ವಾಹನ – ಬೆಂಗಳೂರು ದಂಪತಿ ಸೇರಿ 8 ಮಂದಿ ಪ್ರವಾಸಿಗರು ಸಾವು
ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಕಣಿಮಾದಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬAಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್ – ನಲಪಾಡ್‌ಗೆ ಮತ್ತೆ ಇಡಿ ಸಮನ್ಸ್
