ಹಾಸನ: ವ್ಯಕಿಯೊಬ್ಬ ವಿಪರೀತ ಮದ್ಯ ಸೇವಿಸಿ ಪತ್ನಿಗೆ ಚಾಕು ಇರಿದು ಹತ್ಯೆಗೈದ ಘಟನೆ ಚನ್ನರಾಯಪಟ್ಟಣದ (Channarayapatna) ಹಿರಿಸಾವೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ರೇಖಾ (38) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ರಘು (40) ಎಂದು ಗುರುತಿಸಲಾಗಿದೆ. 18 ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದರು. ಮೊದಲಿನಿಂದಲೂ ಆರೋಪಿ ಪ್ರತಿನಿತ್ಯ ಕಂಠಪೂರ್ತಿ ಕುಡಿದು ಬಂದು ಜಗಳವಾಡುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಕಲಬುರಗಿ | ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಪತಿ
ಬುಧವಾರ (ಸೆ.10) ರಾತ್ರಿ ಇಬ್ಬರು ಗಂಡು ಮಕ್ಕಳು ಟ್ಯೂಷನ್‍ಗೆ ತೆರಳಿದ್ದಾಗ ಪತ್ನಿಯೊಂದಿಗೆ ಆರೋಪಿ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ರೇಖಾಳನ್ನು ಮನೆಯಿಂದ ಹೊರಗೆ ಎಳೆದು ಚಾಕುವಿನಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಹಿರಿಸಾವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ ಶಂಕೆ – ಸುತ್ತಿಗೆಯಿಂದ ಇಂಜಿನಿಯರ್ ತಲೆ ಒಡೆದು ಹತ್ಯೆಗೈದ ಪತಿ