ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ನಡುವೆ ಪತಿಯೇ ಪತ್ನಿಯ ಕುತ್ತಿಗೆಗೆ ವೈರ್ ಬಿಗಿದು ಕೊಲೆ (Murder Case)ಮಾಡಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
35 ವರ್ಷದ ಪವಿತ್ರಾ ಕೊಲೆಯಾದ ಮಹಿಳೆ. ಆರೋಪಿ ಪತಿ ವೆಂಕಟೇಶ್, ವೈರ್‌ನಿಂದ ಪತ್ನಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಂಪತಿಗೆ ಮದುವೆಯಾಗಿ 15 ವರ್ಷಗಳಾಗಿದ್ದು, ಮೂವರು ಮಕ್ಕಳಿದ್ದಾರೆ.
ವೆಂಕಟೇಶ್‌ಗೆ ಕುಡಿತದ ಚಟವಿದ್ದು, ಸಾಕಷ್ಟು ಸಾಲವೂ ಮಾಡಿಕೊಂಡಿದ್ದ. ಈ ವಿಚಾರವಾಗಿ ಪತಿ-ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮನೆ ಕೂಡ ಒತ್ತೆ ಇಟ್ಟಿದ್ದ ಎನ್ನಲಾಗಿದ್ದು, ಇದೇ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.ಇದನ್ನೂ ಓದಿ: ಬಿಎಂಟಿಸಿ ಬಸ್ಸುಗಳ ನಡುವೆ ಡಿಕ್ಕಿ- ಮೂವರು ಪ್ರಯಾಣಿಕರಿಗೆ ಗಾಯ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ವೆಂಕಟೇಶ್‌ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.ಇದನ್ನೂ ಓದಿ: ಮದುವೆಯಾಗಿ 2 ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದ ಸಾವು; ವರದಕ್ಷಿಣೆ ಕಿರುಕುಳ ಶಂಕೆ
