ಚಿತ್ರದುರ್ಗ: ವ್ಯಕ್ತಿಯೊಬ್ಬ ತನ್ನ ಪತ್ನಿಯ (Wife) ಶೀಲ ಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಆಕೆಯ ಮೈ ಸುಟ್ಟಿರುವುದು ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದಿದೆ.
ನಾಗೇಶ್ ಎಂಬಾತ ಆ.15 ರಂದು ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ, ಪತ್ನಿಯ ಮುಖ, ಕೈ-ಕಾಲು, ತೊಡೆ ಸೇರಿ ಹಲವೆಡೆ ಸುಟ್ಟು ವಿಕೃತಿ ಮೆರೆದಿದ್ದಾನೆ. ಮಹಿಳೆಗೆ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಕೆ ಚೇತರಿಸಿಕೊಂಡಿದ್ದಾರೆ. ಗಾಯಾಳು ಮಹಿಳೆ ಬಳ್ಳಾರಿಯ ತವರುಮನೆಯಲ್ಲಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಕೋರ್ಟ್‍ಗೆ ಹಾಜರಾಗದೇ ಕಳ್ಳಾಟ – ಗೋವಾದಲ್ಲಿ ಲಾಯರ್ ಜಗದೀಶ್ ಅರೆಸ್ಟ್
Advertisement
Advertisement
ನಾಗೇಶ್‍ನ ತಂದೆ ಚಂದ್ರಣ್ಣನ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿ ಬಂದಿದೆ.
Advertisement
Advertisement
ಆ.19ರಂದು ಮೊಳಕಾಲ್ಮೂರು ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ನಾಪತ್ತೆಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ. ಇದನ್ನೂ ಓದಿ: ವೈದ್ಯೆ ಜೊತೆ ಅನುಚಿತ ವರ್ತನೆ – ವಿವಾದಿತ ಆಪ್ ಶಾಸಕಿ ರಾಖಿ ಬಿರ್ಲಾ ತಂದೆ ವಿರುದ್ಧ ಎಫ್‍ಐಆರ್