ಬೆಂಗಳೂರು: ಪತಿಯೇ ತನ್ನ ಪತ್ನಿಯನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶೀಗೆಹಳ್ಳಿ ಪ್ರಿಯಾಂಕನಗರದಲ್ಲಿ ನಡೆದಿದೆ.
ನೀಲ (25) ಕೊಲೆಯಾಗಿರುವ ದುರ್ದೈವಿ. ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ಪತಿ ದೊರೆ ಹಗ್ಗದಿಂದ ಪತ್ನಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾನೆ. ಕೆಲಸಕ್ಕೆ ಹೋಗದೇ ಮನೆಯಲ್ಲಿ ಇರುತ್ತಿದ್ದ ಪತಿ ಪ್ರತಿದಿನ ಪತ್ನಿಯನ್ನು ಹಿಂಸಿಸುತ್ತಿದ್ದ. ಅಷ್ಟೇ ಅಲ್ಲದೇ ನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದ.
Advertisement
Advertisement
ಗುರುವಾರ ರಾತ್ರಿಯೂ ಸಹ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ಹೋಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ. ಆದರೆ ಕೊಲೆ ಮಾಡಿದ ಬಳಿಕ ಎಂದಿನಂತೆ ಸ್ನೇಹಿತರೊಂದಿಗೆ ಏನೂ ತಿಳಿಯದಂತೆ ಓಡಾಡಿಕೊಂಡಿದ್ದ. ನಂತರ ನನ್ನ ಹೆಂಡತಿ ಮೇಲೆಳುತ್ತಿಲ್ಲ ಎಂದು ಸ್ನೇಹಿತರಿಗೆ ತಿಳಿಸಿದ್ದಾನೆ.
Advertisement
ಅನುಮಾನಗೊಂಡು ಸ್ಥಳೀಯರು ವಿಚಾರಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿ ಈಗ ಕೆ.ಆರ್.ಪುರ ಪೊಲೀಸರ ವಶದಲ್ಲಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.