ಹಾಸನ: ತನ್ನ ಸಾವಿಗೆ ಪತ್ನಿಯೇ ಕಾರಣವೆಂದು ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ತಾಲೂಕಿನ ಮರ್ಕುಲಿ ಗ್ರಾಮದಲ್ಲಿ ನಡೆದಿದೆ.
ರಾಘವೇಂದ್ರ(45) ಆತ್ಮಹತ್ಯೆ ಮಾಡಿಕೊಂಡ ಪತಿ. ನನ್ನ ಸಾವಿಗೆ ನನ್ನ ಹೆಂಡತಿಯೇ ಕಾರಣ ಎಂದು ಬರೆದು ಸಹಿ ಮಾಡಿ ವಿಷ ಸೇವಿಸಿದ್ದಾರೆ. ತೀವ್ರ ಅಸ್ವಸ್ಥರಾದ ರಾಘವೇಂದ್ರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಘವೇಂದ್ರ ಹಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಹಲವು ವರ್ಷಗಳಿಂದ ಪತಿ-ಪತ್ನಿ ನಡುವೆ ಕೌಟುಂಬಿಕ ಕಲಹ ಆರೋಪ ಕೇಳಿ ಬರುತ್ತಿದೆ. ಸದ್ಯ ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ನಿ ಆಶಾ ವಿರುದ್ದ ಎಫ್ಐಆರ್ ದಾಖಲಾಗಿದೆ.