ಗಾಂಧಿನಗರ: ಪ್ರೀತಿಸುತ್ತಿದ್ದ ಯುವಕನೊಂದಿಗೆ ಓಡಿಹೋಗಲು ಮಹಿಳೆ ಪ್ಲಾನ್ ಮಾಡಿದ್ದು, ಇದನ್ನು ತಿಳಿದ ಆಕೆಯ ಪತಿಯ ಸಂಬಂಧಿಕರೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಗುಜರಾತಿನ ಅಹಮದಾಬಾದಿನಲ್ಲಿ ನಡೆದಿದೆ.
ಈ ಘಟನೆ ಅಹಮದಾಬಾದ್ ಸಮೀಪದ ನಾನಿಕ್ರಾಜ್ ಗ್ರಾಮದಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮಣಿಬೆನ್ ಭಬೋರ್, ರಾಕೇಶ್ ಭಾಬೋರ್, ರಾಜೇಶ್ ಭಾಬೋರ್, ಭಾರತ್ ಮಾವಿ, ದಿನೇಶ್ ಪರ್ಮಾರ್, ನರಸಿಂಗ್ ಮಾವಿ ಮತ್ತು ಸೈಲೇಶ್ ಬಾರಿಯಾ ಎಂದು ಗುರುತಿಸಲಾಗಿದೆ.
ಆರೋಪಿಗಳು ಅತ್ಯಾಚಾರದ ಘಟನೆಯನ್ನು ವಿಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
ಏನಿದು ಪ್ರಕರಣ?
ಸಂತ್ರಸ್ತೆಗೆ ಈಗಾಗಲೇ ಮದುವೆಯಾಗಿದ್ದು, ಮಕ್ಕಳು ಇದ್ದರು. ಆದರೆ ಮಹಿಳೆ ಅದೇ ಗ್ರಾಮದ ಯುವಕನೊಬ್ಬನ ಪ್ರೀತಿಯಲ್ಲಿ ಬಿದ್ದಿದ್ದಳು. ಅಷ್ಟೇ ಅಲ್ಲದೇ ಆತನೊಂದಿಗೆ ಜೀವಿಸಿಲು ಪತಿ ಮತ್ತು ಮಕ್ಕಳನ್ನು ಬಿಟ್ಟು ಹೋಗಲು ಯೋಚಿಸಿದಳು. ಆದರೆ ಮಹಿಳೆ ತನ್ನ ಪ್ರಿಯತಮನ ಜೊತೆ ಓಡಿ ಹೋಗಲು ಪ್ಲಾನ್ ಮಾಡಿರುವ ಬಗ್ಗೆ ಪತಿಯ ಕೆಲ ಸಂಬಂಧಿಕರಿಗೆ ತಿಳಿದಿದೆ.
ಏಳು ಮಂದಿ ಒಟ್ಟಾಗಿ ಇಬ್ಬರನ್ನು ಹಿಡಿದು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಮಾಡಿದ ತಪ್ಪಿಗೆ ಶಿಕ್ಷೆ ಎಂಬಂತೆ ಸಂತ್ರಸ್ತೆಯ ಕೂದಲನ್ನು ಕತ್ತರಿಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಪಾಪಿಗಳು ಐದು ಮಂದಿ ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ.
ಆರೋಪಿಗಳು ಅತ್ಯಾಚಾರದ ದೃಶ್ಯವನ್ನು ವಿಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ತನಿಖೆ ಕೈಗೊಂಡು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv