ತುಮಕೂರು: ಕುಡಿದ ಮತ್ತಿನಲ್ಲಿ ಪತ್ನಿಯನ್ನ ಸ್ಕ್ರೂಡೈವರ್‌ನಿಂದ ಚುಚ್ಚಿ ಕೊಲೆ ಮಾಡಿರೋ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಯಮ್ಮ(52) ಕೊಲೆಯಾದ ದುರ್ದೈವಿ ಮಹಿಳೆ. ತುಮಕೂರು ಜಿಲ್ಲೆ ಹೆಬ್ಬೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ಪ್ರಕರಣ ನಡೆದಿದೆ. ಪಾಪಿ ಪತಿ ನಾಗರಾಜ್(58) ಕೊಲೆಗೈದ ಆರೋಪಿಯಾಗಿದ್ದಾನೆ. ನಾಗರಾಜ್ ಕ್ಷುಲ್ಲಕ ಕಾರಣಕ್ಕೆ ಜಯಮ್ಮಳನ್ನ ಸ್ಕ್ರೂಡೈವರ್‌ನಿಂದ ಚುಚ್ಚಿ ಕೊಲೆ ಮಾಡಿದ್ದೂ, ಅಲ್ಲದೆ ಬಾತ್ ರೂಂ ಫಿಟ್ ಗುಂಡಿಯಲ್ಲಿ ಬಿಸಾಡಿದ್ದಾನೆ. ಇದನ್ನೂ ಓದಿ: ಕೊರೊನಾ ಹರಡಿದ್ದು, ಟ್ರಾಫಿಕ್ ಜಾಮ್ ಮಾಡಿದ್ದು ಪಾದಯಾತ್ರೆ ಸಾಧನೆ: ಕಾರಜೋಳ ವ್ಯಂಗ್ಯ
ನಡೆದಿದ್ದೇನು?
ನಾಗರಾಜ್, ಜಯಮ್ಮಳನ್ನು ಎರಡನೇ ಮದುವೆಯಾಗಿದ್ದನು. ಕಳೆದ ಮೂರು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ವೇಳೆ ಸ್ಕ್ರೂಡೈವರ್ ನಿಂದ ಪತ್ನಿಗೆ ಮನಬಂದಂತೆ ಚುಚ್ಚಿ ಕೊಲೆಗೈದಿದ್ದಾನೆ. ಬಳಿಕ ಮನೆ ಹಿಂಬದಿಯಿದ್ದ ಬಾತ್ ರೂಂ ಫಿಟ್ ಗೆ ಮೃತದೇಹವನ್ನ ಎಸೆದಿದ್ದಾನೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಸ್ತುತ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!