ಲಕ್ನೋ: ಗುಡಿಸಲಿಗೆ (Hut) ಹೊತ್ತಿಕೊಂಡ ಬೆಂಕಿಯಿಂದಾಗಿ (Fire) ತಾಯಿ (Mother) ಹಾಗೂ 4 ಮಕ್ಕಳು (Children) ಸಜೀವದಹನವಾಗಿರುಗ ಘಟನೆ ಉತ್ತರ ಪ್ರದೇಶದ (Uttar Pradesh) ಮೌ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು (Woman) ಗುಡ್ಡಿ ದೇವಿ ಎಂದು ಗುರುತಿಸಲಾಗಿದ್ದು, ತನ್ನ ನಾಲ್ವರು ಮಕ್ಕಳೊಂದಿಗೆ ಗುಡಿಸಲಿನಲ್ಲಿದ್ದಾಗ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಒಲೆಯಲ್ಲಿ ಹಚ್ಚಲಾಗಿದ್ದ ಬೆಂಕಿಯ ಕಿಡಿ ಗುಡಿಸಲಿಗೆ ತಗುಲಿ ಇಡೀ ಗುಡಿಸಲು ಸುಟ್ಟು ಭಸ್ಮವಾಗಿದೆ. ಇದರಿಂದಾಗಿ ಗುಡಿಸಲಿನೊಳಗಿದ್ದ ಮಹಿಳೆ ಹಾಗೂ ಮಕ್ಕಳು ಸಾವನ್ನಪ್ಪಿದ್ದಾರೆ.
Advertisement
Advertisement
ಘಟನೆಯ ಸಂದರ್ಭ ಮಹಿಳೆಯ ಪತಿ ರಾಮಶಂಕರ್ ಬೇರೆಡೆ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉಪ ಪೊಲೀಸ್ ಮಹಾನಿರೀಕ್ಷಕ (DIG) ಅಖಿಲೇಶ್ ಕುಮಾರ್, ಜಿಲ್ಲಾ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಪಾಂಡೆ ಸ್ಥಳಕ್ಕಾಗಮಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇದನ್ನೂ ಓದಿ: ಮಕ್ಕಳಾಗಿಲ್ಲ ಎಂದು ಪತ್ನಿಯನ್ನು ಥಳಿಸಿದ ಪತಿ- ಖಾಸಗಿ ಅಂಗಕ್ಕೆ ಗಾಯ
Advertisement
UP | 5 members of a family including a woman, 1 adult & 3 minors died in a house fire that broke out at Shahpur village, Kopaganj PS in Mau district. Police along with the fire brigade, medical & relief teams reached the spot: DM Arun Kumar, Mau
(27.12) pic.twitter.com/0DsqW5HwDT
— ANI UP/Uttarakhand (@ANINewsUP) December 27, 2022
Advertisement
ಮಹಿಳೆ ತನ್ನ 4 ಮಕ್ಕಳೊಂದಿಗೆ ಗುಡಿಸಲಿನಲ್ಲಿ ವಾಸಿಸುತ್ತಿದ್ದರು, ಆದರೆ ಮಂಗಳವಾರ ತಡರಾತ್ರಿ ಗುಡಿಸಲಿಗೆ ಹೊತ್ತಿಕೊಂಡ ಬೆಂಕಿಯಿಂದಾಗಿ ಆಕೆಯ ಪತಿಯನ್ನು ಹೊರತುಪಡಿಸಿ ಇಡೀ ಕುಟುಂಬ ಸುಟ್ಟು ಕರಕಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಇದನ್ನೂ ಓದಿ: ಮಿನಿ ಬಸ್, ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ – 12 ವಿದ್ಯಾರ್ಥಿಗಳಿಗೆ ಗಾಯ