ಚಾಮರಾಜನಗರ: ಅಡುಗೆ ಮಾಡುವಾಗ ಬೆಂಕಿ ತಗುಲಿದ ಪರಿಣಾಮ ಗುಡಿಸಲು ಸುಟ್ಟು ಭಸ್ಮವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬಸವಣ್ಣ ಎಂಬವರಿಗೆ ಸೇರಿದ ಗುಡಿಸಲು ಮನೆ ಇದಾಗಿದ್ದು, ಕಟ್ಟಿಗೆ ಸೌದೆಯ ಮೂಲಕ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ತಗುಲಿದೆ. ತೆಂಗಿನ ಗರಿಯ ಗುಡಿಸಲು ಮನೆಯಾಗಿದ್ದರಿಂದ ಬೆಂಕಿ ಬೇಗ ಹೊತ್ತಿಕೊಂಡು ಮನೆ ಸಂಪೂರ್ಣವಾಗಿ ಸುಟ್ಟಹೋಗಿದೆ.
ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯ ಸದಸ್ಯರು ಹೊರಗೆ ಬಂದಿದ್ರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.